ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

| Published : Aug 12 2025, 12:30 AM IST

ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಚಿಕ್ಕ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರ ಪೂರಕ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಬೇಕು.

ಹಾವೇರಿ: ಜಿಲ್ಲಾದ್ಯಂತ ಆ. 27ರಿಂದ ಆರಂಭವಾಗುವ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ಸಾರ್ವಜನಿಕರು ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ವಿಗ್ರಹಗಳ ಉತ್ಪಾದನೆ, ಮಾರಾಟ ಮಾಡುವುದನ್ನು ರಾಜ್ಯಾದಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೆಯೇ ಹಸಿರು ಪಟಾಕಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಸಿಡಿಸಬೇಕು. ಸರ್ಕಾರದ ಆದೇಶ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಿರ್ದೇಶನದಂತೆ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆ ಅವಧಿಯಲ್ಲಿ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಅಥವಾ ಧ್ವನಿಯನ್ನುಂಟು ಮಾಡುವ ಡೋಲು, ತಮ್ಮಟೆ ಜಾಗಟೆ ಇತ್ಯಾದಿ ಇವುಗಳನ್ನು ತುರ್ತು ಸಮಯವನ್ನು ಹೊರತುಪಡಿಸಿ ಉಳಿದ ಸಂದರ್ಭಗಳಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿರುತ್ತದೆ ಎಂದಿದ್ದಾರೆ.ಹಬ್ಬದ ಸಂದರ್ಭದಲ್ಲಿ ರಸ್ತೆ ಮತ್ತು ಚರಂಡಿಗಳಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬೇಡಿ, ಮನೆಯ ಹತ್ತಿರ ಬರುವ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಿಗೆ ನೀಡಿ, ಹಬ್ಬ ಆಚರಿಸಿದ ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸಂಚಾರಿ ತೊಟ್ಟಿಗಳಲ್ಲಿ ಅಥವಾ ಕಲ್ಯಾಣಿಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಿ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು.

ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಚಿಕ್ಕ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರ ಪೂರಕ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೈವಿಕ ಇಂಧನ ದಿನಾಚರಣೆ ಪ್ರಯುಕ್ತ ಜಾಗೃತಿ

ರಾಣಿಬೆನ್ನೂರು: ಎಥೆನಾಲ್ ಒಂದು ಪರ್ಯಾಯ ಇಂಧನವಾದ ಕಾರಣ ಮುಂದಿನ ದಿನಗಳಲ್ಲಿ ಎಥೆನಾಲ್‌ಗೆ ಭವಿಷ್ಯವಿದೆ ಎಂದು ನೀಡ್ಸ್ ಸಂಸ್ಥೆಯ ಸಿಇಒ ಎಚ್.ಎಫ್. ಅಕ್ಕಿ ತಿಳಿಸಿದರು.ತಾಲೂಕಿನ ಹೊನ್ನತ್ತಿ ಪ್ರೌಢಶಾಲೆಯಲ್ಲಿ ಜಿಲ್ಲೆಯ ಜೈವಿಕ ಇಂಧನ ಉಸ್ತುವಾರಿ ಸಮಿತಿ, ಜಿಲ್ಲಾ ಮುಂದಾಳು ಸಂಸ್ಥೆ ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಸೇವಾ ಸಂಸ್ಥೆ(ನೀಡ್ಸ್) ಆಶ್ರಯದಲ್ಲಿ ಜೈವಿಕ ಇಂಧನ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಅರಿವು ಜಾಗೃತಿ ಮತ್ತು ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ ತಾಲೂಕಿನಲ್ಲಿ ಭತ್ತ ಮತ್ತು ಗೋವಿನಜೋಳದಿಂದ ಎಥೆನಾಲ್ ತಯಾರಿಸಲಾಗುತ್ತಿದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಶಿವರಾಜ ಶೀಮೀಕೇರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಗುಡ್ಡಪ್ಪ ಪಟ್ಟಣಶೆಟ್ಟಿ, ಶಿಕ್ಷಕರಾದ ರವಿಕಾಂತ ನಾಯಕ, ಮಮತಾ ಕಡ್ಲಿಮಠ, ನೀಡ್ಸ್ ಸಂಸ್ಥೆಯ ತಿಪ್ಪೇಶಪ್ಪ ಕನ್ನಮ್ಮನವರ ಮತ್ತಿತರರಿದ್ದರು.