ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಒತ್ತು: ನಿಖಿಲ್ ಕುಮಾರಸ್ವಾಮಿ

| Published : Nov 01 2025, 01:45 AM IST

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಒತ್ತು: ನಿಖಿಲ್ ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ಕುಮಾರಸ್ವಾಮಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಹಾಗಾಗಿ ಜೆಡಿಎಸ್‌ಗೆ ಜಿಲ್ಲೆಯಲ್ಲಿ ಯಾವ ತೊಂದರೆಯೂ ಇಲ್ಲ, ಯಾರೂ ಆತಂಕಪಡಬೇಕಾಗಿಯೂ ಇಲ್ಲ. ಕುಮಾರಸ್ವಾಮಿ ಅವರು ಗೆದ್ದಾಗ ನಾವು ಯಾರನ್ನಾದರೂ ಪ್ರಶ್ನೆ ಮಾಡಿದೆವಾ?, ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದು ಬೇಡ. ದೇವೇಗೌಡ್ರು ಕುಟುಂಬ ಈ ತರಹದ ಸಾಕಷ್ಟು ಚುನಾವಣೆಗಳನ್ನು ನೋಡಿರುವುದಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿರುವುದು ನಿಜ. ಅದರ ಬಗ್ಗೆ ಈಗ ಚರ್ಚಿಸಿ ಯಾವುದೇ ಪ್ರಯೋಜನವಿಲ್ಲ. ಜಿಲ್ಲೆಯೊಳಗೆ ಜೆಡಿಎಸ್ ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದ ಸ್ವರ್ಣಸಂದ್ರದಲ್ಲಿ ಶ್ರೀ ಕಾಳಮ್ಮ ಮತ್ತು ಶ್ರೀ ಮಾರಮ್ಮ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇವೇಗೌಡರ ಕುಟುಂಬ ಈ ರೀತಿಯ ಸಾಕಷ್ಟು ಚುನಾವಣೆಗಳನ್ನು ನೋಡಿದೆ. ಚುನಾವಣೆಯಲ್ಲಿ ಏಳು- ಬೀಳು ಸಹಜ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿರಬಹುದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವ ಕೆಲಸ ಆಗುತ್ತದೆ ಎಂದು ಹೇಳಿದರು.

ಜಿಲ್ಲೆಯ ನಾಯಕರು ಒಗ್ಗಟ್ಟಿನಿಂದ ಹೇಗೆ ಕೆಲಸ ಮಾಡಬೇಕು. ಪಕ್ಷ ಸಂಘಟನೆ ಹೇಗೆ ಮಾಡಬೇಕು ಎಂಬ ಬಗ್ಗೆ ಸಭೆಯಲ್ಲಿ ಕುಳಿತು ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಅವರೆಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷವನ್ನು ಮತ್ತೆ ಗಟ್ಟಿಗೊಳಿಸುವುದಾಗಿ ವಿಶ್ವಾಸದಿಂದ ನುಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ಕುಮಾರಸ್ವಾಮಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಹಾಗಾಗಿ ಜೆಡಿಎಸ್‌ಗೆ ಜಿಲ್ಲೆಯಲ್ಲಿ ಯಾವ ತೊಂದರೆಯೂ ಇಲ್ಲ, ಯಾರೂ ಆತಂಕಪಡಬೇಕಾಗಿಯೂ ಇಲ್ಲ. ಕುಮಾರಸ್ವಾಮಿ ಅವರು ಗೆದ್ದಾಗ ನಾವು ಯಾರನ್ನಾದರೂ ಪ್ರಶ್ನೆ ಮಾಡಿದೆವಾ?, ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದು ಬೇಡ. ದೇವೇಗೌಡ್ರು ಕುಟುಂಬ ಈ ತರಹದ ಸಾಕಷ್ಟು ಚುನಾವಣೆಗಳನ್ನು ನೋಡಿರುವುದಾಗಿ ಹೇಳಿದರು.

ಕೇಂದ್ರ ಸಚಿವರ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ಎಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಚುನಾವಣೆ ನಡೆಸುವುದರಲ್ಲಿ ಬಹಳ ಬುದ್ದಿವಂತರಿದ್ದಾರೆ ಬಿಡಿ ಎಂದಷ್ಟೇ ಹೇಳಿ ಮುಗಿಸಿದರು.