ಎಂ.ಬಿ.ಪಾಟೀಲರಿಂದ ಗ್ರಾಮೀಣ ಶಿಕ್ಷಣಕ್ಕೆ ಒತ್ತು

| Published : Oct 08 2024, 01:02 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಸಚಿವ ಎಂ.ಬಿ.ಪಾಟೀಲರು ಶಾಲೆಗಳು ಮತ್ತು ವಿದ್ಯಾರ್ಥಿಗಳಿಗೆ ಮೂಲಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಚಿವ ಎಂ.ಬಿ.ಪಾಟೀಲರು ಶಾಲೆಗಳು ಮತ್ತು ವಿದ್ಯಾರ್ಥಿಗಳಿಗೆ ಮೂಲಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಹೇಳಿದರು.

ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ಎಂ.ಬಿ.ಪಾಟೀಲ ಫೌಂಡೇಶನ್‌ನಿಂದ ಸಚಿವ ಎಂ.ಬಿ.ಪಾಟೀಲ ಅವರ ಜನ್ಮದಿನದ ಅಂಗವಾಗಿ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5,6ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಿಸಿ ಮಾತನಾಡಿದರು. ಸಚಿವರು ಜನಪರ ಕಾರ್ಯಕ್ರಮಗಳ ಮೂಲಕ ಈ ಭಾಗದಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸರ್ವಜನರ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಸಚಿವರ ಆಪ್ತ ಸಹಾಯಕ ದಶರಥ ಭೋಸ್ಲೆ ಮಾತನಾಡಿ, ಜಲಸಂಪನ್ಮೂಲ ಸಚಿವರಾಗಿ ನೀರಾವರಿ ಕ್ರಾಂತಿ ಮಾಡಿರುವ ಎಂ.ಬಿ.ಪಾಟೀಲರು, ಈಗ ಕೈಗಾರಿಕೆ ಸಚಿವರಾಗಿ ಕೈಗಾರಿಕೆ ಕ್ರಾಂತಿ ಮಾಡುತ್ತಿದ್ದಾರೆ. ಅಲ್ಲದೇ, ಸಿಎಸ್ಆರ್‌ ಫಂಡ್ ಮೂಲಕ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಅನುದಾನ ಒದಗಿಸಿ ಶೈಕ್ಷಣಿಕ ಕ್ರಾಂತಿಗೆ ಕಾರಣರಾಗಿದ್ದಾರೆ ಎಂದರು.

ಶಿಕ್ಷಣ ಸಂಯೋಜಕ ಪ್ರಭು ಬಿರಾದಾರ ಮಾತನಾಡಿ, ಸಚಿವರ ಮುತುವರ್ಜಿಯಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳು ಸಿಗುತ್ತಿವೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.ಈ ವೇಳೆ ಗ್ರಾಪಂ ಅಧ್ಯಕ್ಷ ಸಂಗಮೇಶ ಬೀಳಗಿ, ಮುಖಂಡರಾದ ಜಗನ್ನಾಥ ಹಿರೇದೇಸಾಯಿ, ಪ್ರಶಾಂತ ದೇಸಾಯಿ, ಹಣಮಂತ ಚೋಳಪ್ಪಗೋಳ, ಶ್ರೀಶೈಲ ತುಪ್ಪದ, ಸದಾನಂದ ಮಂಟೂರ, ಗ್ರಾಪಂ ಮಾಜಿ ಉಪಾಧ್ಯಕ್ಷ ಅಮಿತ ದೇಸಾಯಿ, ಗ್ರಾಪಂ ಸದಸ್ಯರಾದ ಉತಾಲಸಾಬ ಬೆಳ್ಳಗಿ, ಎಸ್ಡಿಎಂಸಿ ಅಧ್ಯಕ್ಷ ಭರಮಪ್ಪ ಕಲ್ಲವ್ವಗೋಳ, ಶಿಕ್ಷಣ ಸಂಯೋಜಕ ವಸಂತ ಚವ್ಹಾಣ, ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಕೋರೆ, ಶಿಕ್ಷಕ ವಿ.ಎಸ್.ನಿಂಗರಡ್ಡಿ, ಎಚ್.ಎಂ.ಚಿತ್ತರಗಿ, ಎ.ಎಸ್.ರೂಪರಾವರ, ಸಂಗಮೇಶ ಕೋಲಕಾರ ಮುಂತಾದವರು ಇದ್ದರು.