ಸಾರಾಂಶ
- ಉದ್ಯೋಗಸ್ಥ ಮಹಿಳೆಯರೊಂದಿಗೆ ಪ್ರಭಾ ಮಲ್ಲಿಕಾರ್ಜುನ್ ಸಂವಾದ
- - -ಕನ್ನಡಪ್ರಭ ವಾರ್ತೆ, ದಾವಣಗೆರೆ
ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ಮಂಗಳವಾರ ನಗರದ ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಉದ್ಯೋಗಸ್ಥ ಮಹಿಳೆಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು ಮಹಿಳೆಯರ ಸಬಲೀಕರಣ ಅವಶ್ಯಕತೆ ಇರುವುದನ್ನು ಮನಗಂಡು ಕಾಂಗ್ರೆಸ್ ಸರ್ಕಾರ ಪ್ರತಿ ಮಹಿಳೆಗೆ ಪ್ರತಿ ತಿಂಗಳು ₹2 ಸಾವಿರ ನೀಡುತ್ತಿದೆ. ಶಕ್ತಿ ಯೋಜನೆ ಮೂಲಕ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅನುಕೂಲ ಕಲ್ಪಿಸಿದೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಮಹಿಳಾ ಸಂಘಗಳನ್ನು ಆರಂಭಿಸುವ ಮೂಲಕ ಉಳಿತಾಯಕ್ಕೆ ಹೆಚ್ಚಿನ ಒತ್ತು ನೀಡಾಗಿದೆ ಎಂದರು.ಇನ್ನು ಹೆಚ್ಚಿನ ರೀತಿಯಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಗಾರ್ಮೆಂಟ್ಸ್ ಮತ್ತು ಕರಕುಶಲ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ನಡೆಸಲಾಗಿದೆ. ಜೊತೆಗೆ ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಈ ಸಂದರ್ಭ ವಿವಿಧ ಗಾಮೆಂಟ್ಸ್ ಕಂಪನಿಗಳ ಡಿ.ಸಿ. ಶ್ರೀನಿವಾಸ್, ಸತ್ಯನಾರಾಯಣ, ಕೋಮಲ ಜೈನ್, ಹಾಲೇಶ್ ಗೌಡ, ಆರೀಫ್, ವಿಶ್ವನಾಥ, ಶ್ರೀನಿವಾಸ್, ಕಿಶನ್, ಮಹಾಂತ ಮೋಟಾರ್ಸ್ ಪ್ರಕಾಶ್, ಪ್ರಶಾಂತ್, ಮುರುಗೇಶಪ್ಪ ಮತ್ತಿತರರಿದ್ದರು.- - -
ಬಾಕ್ಸ್ ಆವರಗೆರೆ ಕೆರೆ ಕುಂದುವಾಡ ಕೆರೆಯಂತೆ ಅಭಿವೃದ್ಧಿದಾವಣಗೆರೆ: ನಗರಕ್ಕೆ ಹೊಂದಿಕೊಂಡಿರುವ ಆವರಗೆರೆ ಕೆರೆಯನ್ನು ಕುಂದುವಾಡ ಕೆರೆಯಂತೆ ಅಭಿವೃದ್ಧಿಗೊಳಿಸಿ, ಉತ್ತಮ ಪ್ರವಾಸಿ ತಾಣವಾಗಿ ರೂಪಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.
ಮಂಗಳವಾರ ಆವರಗೆರೆ ಗ್ರಾಮದಲ್ಲಿ ಪ್ರಚಾರ ನಡೆಸಿದ ಅವರು, ಆವರಗೆರೆಯನ್ನು ಈಗಾಗಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಂಡಿದ್ದು, ಕೆರೆಗೆ ತುಂಗಭದ್ರಾ ನದಿ ಅಥವಾ ಭದ್ರಾ ಕಾಲುವೆಯಿಂದ ನೀರು ಸರಬರಾಜು ಮಾಡಿ, ಈ ಭಾಗದಲ್ಲಿ 24 ಗಂಟೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭರವಸೆ ನೀಡಿದಂತೆ 5 ಗ್ಯಾರಂಟಿಗಳನ್ನು ಜಾರಿಗೆತಂದಿದ್ದು, ಇಂತಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರುವ ಚಿಂತನೆ ನಡೆಸಿದೆ ಎಂದರು.ಪ್ರಚಾರದಲ್ಲಿ ತಾಯಿ-ಮಗಳು ಮುಖಾಮುಖಿ:
ಡಾ. ಪ್ರಭಾ ಮಲ್ಲಿಕಾರ್ಜುನ್ ಪಾಲಿಕೆ ವ್ಯಾಪ್ತಿಯ 30ನೇ ವಾರ್ಡ್ ಆವರಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭ ಅದೇ ಗ್ರಾಮದಲ್ಲಿ ಮಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಗಿರಿಜಮ್ಮ (ಪ್ರಭಾ ಮಲ್ಲಿಕಾರ್ಜುನ್ ತಾಯಿ) ಭೇಟಿಯಾದರು.ಈ ಸಂದರ್ಭ ಪಾಲಿಕೆ ಸದಸ್ಯೆ ಜಯಮ್ಮ ಗೋಪಿನಾಯ್ಕ, ಕರೇಗೌಡರ ರೇವಣಪ್ಪ, ಅಣ್ಣೇಶ್ ನಾಯ್ಕ ಮತ್ತಿತರರಿದ್ದರು.
- - - -16ಕೆಡಿವಿಜಿ46, 47ಃ:ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ವಿವಿಧ ಗಾರ್ಮೆಂಟ್ಸ್ ಗಳಿಗೆ ಭೇಟಿ ನೀಡಿ ಮಹಿಳೆಯರೊಂದಿಗೆ ಸಂವಾದ ನಡೆಸಿದರು.