ಸಾರಾಂಶ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಮತಗಳು ಬಂದಿವೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸಹ ಕ್ಷೇತ್ರದಾದ್ಯಂತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ. ಮಹಿಳೆಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಜೊತೆಗೆ ಮತ್ತಷ್ಟು ಪಕ್ಷ ಸಂಘಟನೆ ಒತ್ತು ನೀಡಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಪಕ್ಷಕ್ಕೆ ಮತ ಬಂದಿದೆ. ಮತ್ತಷ್ಟು ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ತಿಳಿಸಿದರು.ತಾಲೂಕಿನ ಪೀಹಳ್ಳಿ ಗ್ರಾಮದ ಬಿಜೆಪಿ ಶ್ರೀರಂಗಪಟ್ಟಣ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್ ಮನೆಗೆ ಭೇಟಿ ನೀಡಿ, ಕ್ಷೇತ್ರದ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿ ಮಹಿಳಾ ಮೋರ್ಚಾ, ರೈತ ಮೋರ್ಚಾ ಸೇರಿದಂತೆ ಇತರೆ ಮೋರ್ಚಾಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಮತಗಳು ಬಂದಿವೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸಹ ಕ್ಷೇತ್ರದಾದ್ಯಂತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ. ಮಹಿಳೆಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಜೊತೆಗೆ ಮತ್ತಷ್ಟು ಪಕ್ಷ ಸಂಘಟನೆ ಒತ್ತು ನೀಡುವಂತೆ ರಮೇಶ್‌ಗೆ ತಿಳಿಸಿದರು.ಈ ವೇಳೆ ಮೈಸೂರು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಇದ್ದರು.ಸಂಘಕ್ಕೆ ಎಂ.ಎಚ್.ಪುಟ್ಟಸ್ವಾಮಿ ಆಯ್ಕೆಮಳವಳ್ಳಿ:ಪಟ್ಟಣದ ಶ್ರೀಗಂಗಾಪರಮೇಶ್ವರಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಚ್.ಪುಟ್ಟಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ತೆರವಾಗಿದ್ದ ಸ್ಥಾನಕ್ಕೆ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಂ.ಎಚ್.ಪುಟ್ಟಸ್ವಾಮಿ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ರಾಮಕೃಷ್ಣ ಘೋಷಣೆ ಮಾಡಿದರು.ನೂತನ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಂಘದ ನಿರ್ದೇಶಕರಿಗೆ ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರತಿಯೊಬ್ಬರ ಸಹಕಾರದಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಪ್ರಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದರು.ಈ ವೇಳೆ ಸಂಘದ ಉಪಾಧ್ಯಕ್ಷತೆ ಪೂರ್ಣಿಮಾ, ನಿರ್ದೇಶಕರಾದ ಪ್ರಸಾದ್, ಸಿದ್ದಪ್ಪ, ಬಸವರಾಜು, ರವಿಕುಮಾರ್, ಸತೀಶ್, ಚಿಕ್ಕವಂತೂರಯ್ಯ, ಪುಟ್ಟಸ್ವಾಮಿ, ಲಕ್ಷಮ್ಮ, ಶ್ರೀನಿವಾಸ್, ಪುರಸಭೆ ಸದಸ್ಯ ನಾಗೇಶ್, ಮುಖಂಡರಾದ ನಾರಯಣ್,ರವಿ, ರಾಮಚಂದ್ರ, ಮಾದೇಶ್, ಕಂಬರಾಜು, ಶಿವಕುಮಾರ್, ಬಸವರಾಜು, ಸತೀಶ್, ಕುಮಾರ್,ಜಗದೀಶ್, ಬಸಪ್ಪ, ಪರಮೇಶ್ ಸೇರಿದಂತೆ ಇತರರು ಇದ್ದರು.