ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಂಗಳ ಮಾತನಾಡಿ, ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.ಕೆಸಿ ವ್ಯಾಲಿ 3ನೇ ಹಂತ ಶುದ್ಧೀಕರಣಸಮಾಜ ಸೇವಕ ಕೆ.ಎನ್.ಎನ್.ಪ್ರಕಾಶ್ ಮಾತನಾಡಿ, ಕೋಲಾರ ಜಿಲ್ಲೆಗೆ ಕೆಸಿವ್ಯಾಲಿ ಹರಿದ ನಂತರ ಟೊಮೆಟೋ ಮತ್ತಿತರರ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿವೆ. ಆದರೂ ಕೆಸಿವ್ಯಾಲಿ ೩ನೇ ಹಂತದ ಶುದ್ಧೀಕರಣ ಮಾಡಿ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ವಿಫಲವಾಗಿದ್ದಾರೆ. ಅಲ್ಲದೆ ಕೋಲಾರ ಜಿಲ್ಲೆಯ ಟೊಮೇಟೊ ಬೆಳೆ ಸಂಪೂರ್ಣವಾಗಿ ಕುಸಿದಿದೆ. ಹೊರ ಜಿಲ್ಲೆಗಳಿಂದ ಬರುವ ಟೊಮೇಟೊ ಅವಕದಿಂದ ಕೋಲಾರ ಮಾರುಕಟ್ಟೆ ನಡೆಯುವ ಪರಿಸ್ಥಿಯಿದೆ ಎಂದು ವಿಷಾದಿಸಿದರು.ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಹಿಳಾ ರೈತ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ಮತ್ತಿತರರು ಇದ್ದರು.