ಸಾರಾಂಶ
ನರಸಿಂಹರಾಜಪುರ, ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದ ಏಕೀಕೃತ ಪಿಂಚಣಿ ಯೋಜನೆಯೂ ಸರ್ಕಾರಿ ನೌಕರರ ವಿರುದ್ಧವಾಗಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದವರು ತಹಸೀಲ್ದಾರ್ ತನುಜ ಟಿ. ಸವದತ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸರ್ಕಾರಿ ಎನ್.ಪಿ.ಎಸ್. ನೌಕರರಿಂದ ತಹಸೀಲ್ದಾರ್ ಗೆ ಮನವಿ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದ ಏಕೀಕೃತ ಪಿಂಚಣಿ ಯೋಜನೆಯೂ ಸರ್ಕಾರಿ ನೌಕರರ ವಿರುದ್ಧವಾಗಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದವರು ತಹಸೀಲ್ದಾರ್ ತನುಜ ಟಿ. ಸವದತ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಮಾತನಾಡಿ, 2006 ರ ನಂತರ ಸರ್ಕಾರಿ ನೌಕರಿಗೆ ಸೇರಿದವರಿಗೆ ಹೊಸ ಪಿಂಚಣಿ ಯೋಜನೆ ಅನ್ವಯವಾಗುತ್ತದೆ. ಹೊಸ ಪಿಂಚಣಿ ಯೋಜನೆ ಬೇಡ, ಹಳೇ ಪಿಂಚಣಿ ಯೋಜನೆ ಜಾರಿಗೆ ತನ್ನಿ ಎಂದು ಕಳೆದ 10 ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೆ, ಏನು ಪ್ರಯೋಜನವಾಗಿಲ್ಲ. ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಏಕೀಕೃತ ಪಿಂಚಣಿ ಯೋಜನೆಯಲ್ಲಿಯೂ ಷೇರು ಮಾರುಕಟ್ಟೆಯ ಪಾಲುದಾರಿಕೆ ಇರುತ್ತದೆ. ಅದರಲ್ಲಿರುವ ಕೆಲವು ಅಂಶ ಗಳು ಸರ್ಕಾರಿ ನೌಕರರ ಜೀವನಕ್ಕೆ ಭದ್ರತೆ ಕೊಡುವಲ್ಲಿ ವಿಫಲವಾಗಿದೆ. ಆದ್ದರಿಂದ ಇಂದು ರಾಷ್ಟ್ರಾದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರದಲ್ಲಿ ನೋ ಎನ್.ಪಿ.ಎಸ್, ನೋ ಯುಪಿಎಸ್, ಓನ್ಲೀ ಓಪಿಎಸ್ ಎಂಬ ಶೀರ್ಷಿಕೆಯಡಿ ಸರ್ಕಾರಕ್ಕ ಮನವಿ ಸಲ್ಲಿಸಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಕಾರ್ಯದರ್ಶಿ ಸುಬಾಷ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಗೌಸ್ ಮಹಿಯುದ್ದೀನ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಕ್ಷಕ್ಷ ಎಚ್. ಮಂಜುನಾಥ್, ತಾಲೂಕು ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೃಷ್ಣಪ್ಪ ಹಾಗೂ ತಾಲೂಕಿನ ಎಲ್ಲಾ ಸರ್ಕಾರಿ ಎನ್.ಪಿ.ಎಸ್ ನೌಕರರು ಮತ್ತು ಓಪಿಎಸ್. ನೌಕರರು ಉಪಸ್ಥಿತರಿದ್ದರು.