ಬೇಡಿಕೆ ಇಡೇರಿಕೆಗೆ ಸಚಿವರಿಗೆ ನೌಕರರ ಮನವಿ

| Published : Jul 14 2024, 01:43 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ಏಳನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವದು. ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಶಡಶ್ಯಾಳ, ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಬೇಗನೆ ಇಡೇರಿಸಬೇಕು. ನೌಕರರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ‌ಸಿದ್ದರಾಮಯ್ಯನವರು ನೌಕರರ ಪರವಾಗಿ ನಮ್ಮ ಸರ್ಕಾರವಿದೆ, ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ನೌಕರರಿಗೆ ನಿರಾಸೆ ಮಾಡದೇ ಸರ್ಕಾರ ಬೇಡಿಕೆ ಇಡೇರಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ಖಜಾಂಚಿ ಜುಬೇರ ಕೆರೂರ, ಗಂಗಾಧರ ಜೇವೂರ, ವಿಜಯಕುಮಾರ ಹತ್ತಿ, ವಿಶ್ವನಾಥ ಬೆಳೆನ್ನವರ, ಚನ್ನಯ್ಯು ಮಠಪತಿ ಇತರರು ಇದ್ದರು.