ಸಾರಾಂಶ
ಮೊದಲ ಹಂತವಾಗಿ ೧೯ ಮಂದಿ ಅಭ್ಯರ್ಥಿಗಳು ಆಗಸ್ಟ್ ೧೨ರಂದು ಉದ್ಯೋಗಕ್ಕೆ ಸೇರ್ಪಡೆಯಾಗಲಿದ್ದಾರೆ
ಕನ್ನಡಪ್ರಭ ವಾರ್ತೆ ಪುತ್ತೂರು
ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಪ್ರಯತ್ನದಿಂದಾಗಿ ಪುತ್ತೂರಿನ ೧೯ ಮಂದಿಗೆ ಬೆಂಗಳೂರು ಬಿಎಂಟಿಸಿಯಲ್ಲಿ ಉದ್ಯೋಗ ದೊರಕಿದೆ.ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಅವರು ಶಾಸಕರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪುತ್ತೂರಿನ ಯುವಕರಿಗೆ ಕೆಲಸ ಕೊಡಿಸಬೇಕು, ತಮ್ಮ ಕುಟುಂಬವನ್ನು ಸಲಹಬೇಕು ಎಂಬ ಉದ್ದೇಶದಿಂದ ಉದ್ಯೋಗ ಹುಡುಕಿಕೊಂಡು ಬರುವ ಯುವಕರಿಗೆ ವ್ಯವಸ್ಥೆ ಕಲ್ಪಿಸುವ ಶಾಸಕರು ಪುತ್ತೂರಿನ ಯುವಕರನ್ನೇ ಆ ಹುದ್ದೆಗೆ ನೇಮಕಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಬಾರಿ ಬೆಂಗಳೂರಿನ ಬಿಎಂಟಿಸಿಯಲ್ಲಿ ಚಾಲಕ ಹುದ್ದೆಗೆ ೫೦ ಮಂದಿ ಪುತ್ತೂರಿನ ಯುವಕರಿಗೆ ಅವಕಾಶ ನೀಡಬೇಕು ಎಂದು ಬಿಎಂಟಿಸಿಯ ಜೊತೆಗೆ ಮಾತುಕತೆ ನಡೆಸಿದ್ದಾರೆ. ಮೊದಲ ಹಂತವಾಗಿ ೧೯ ಮಂದಿ ಅಭ್ಯರ್ಥಿಗಳು ಆಗಸ್ಟ್ ೧೨ರಂದು ಉದ್ಯೋಗಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.
ರೈ ಚಾರಿಟೇಬಲ್ ಟ್ರಸ್ಟ್ ಸೋಶಿಯಲ್ ಮೀಡಿಯಾ ಮುಖ್ಯಸ್ಥರಾದ ಕೃಷ್ಣಪ್ರಸಾದ್ ಬೊಳ್ಳಾವು ಉಪಸ್ಥಿತರಿದ್ದರು. ಟ್ರಸ್ಟ್ ಸಿಬಂದಿ ಲಿಂಗಪ್ಪ ಸ್ವಾಗತಿಸಿ ವಂದಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))