ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಜನವರಿ 26ಕ್ಕೆ ಕನಿಷ್ಠ ಒಂದು ಸಾವಿರ ಜನಕ್ಕೆ ಉದ್ಯೋಗ ಕೊಡಿಸುವ ಗುರಿ ನಮ್ಮದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.ತುಮಕೂರು ವಿವಿ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿ.ಪಂ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ವಿವಿ ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ರೆಡ್ಡೀಸ್ ಫೌಂಡೇಶನ್ ತುಮಕೂರು ಆಶ್ರಯದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದರುಈ ಉದ್ಯೋಗ ಮೇಳಕ್ಕೆ ಸುಮಾರು 5 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿರುವುದು ಸಂತಸದ ಸುದ್ದಿ. ಉದ್ಯೋಗ ಮೇಳದಲ್ಲಿ ಸುಮಾರು 100 ಕ್ಕೂ ಕಂಪನಿಗಳು ಭಾಗಿಯಾಗಿದ್ದು ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆ ಮತ್ತು ಕೌಶಲ್ಯಗಳಿಗೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಇದೊಂದು ಸುಸಜ್ಜಿತ ವೇದಿಕೆಯಾಗಿದೆ ಎಂದರು.ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗ ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯ ಬಳಸಿಕೊಂಡು ಉದ್ಯೋಗ ಸೃಷ್ಟಿಸುವಂತಾಗಬೇಕು ಎಂದರು.ಮೊದಲು ಸಿಕ್ಕಿರುವ ಉದ್ಯೋಗಾವಕಾಶಗಳನ್ನು ಉಪಯೋಗಿಸಿಕೊಂಡು ನಂತರ ವೇತನದ ಬಗ್ಗೆ ಯೋಚಿಸಿ, ಉದ್ಯೋಗಾವಕಾಶಗಳು ಚಿಕ್ಕದಿರಲಿ ದೊಡ್ಡದಿರಲಿ ಬಳಸಿಕೊಳ್ಳುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತುಮಕೂರು ವಿವಿಯ ಕುಲಸಚಿವರಾದ ನಾಹಿದಾಜಮ್‌ಜಮ್ ಮಾತನಾಡಿ, ಜಿಲ್ಲಾಡಳಿತವು ನಿಮ್ಮ ಮನೆ ಬಾಗಿಲಿಗೆ ಕೆಲಸದ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಕಂಪನಿಗಳು ತಮಗೆ ಅವಶ್ಯವಿರುವ ಉದ್ಯೋಗಾಕಾಂಕ್ಷಿಗಳ ಕಡೆ ಗಮನ ಹರಿಸುತ್ತದೆ, ಆದ್ದರಿಂದ ಉದ್ಯೋಗಾಕಾಂಕ್ಷಿಗಳು ಉತ್ತಮ ಸಂವಹನ ಕೌಶಲ್ಯ ಜೊತೆಗೆ ಉದ್ಯೋಗಕ್ಕೆ ಬೇಕಾದ ತಾಂತ್ರಿಕ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ತುಮಕೂರು ವಿವಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಇಂತಹ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.ತುಮಕೂರು ವಿವಿಯ ಉದ್ಯೋಗ ನಿಯೋಜನಾಧಿಕಾರಿಗಳು ಹಾಗೂ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಪರಶುರಾಮ್ ಕೆ.ಜಿ. ಮಾತನಾಡಿ,ಈ ಬಾರಿ 11 ಸಾವಿರ ವಿದ್ಯಾರ್ಥಿಗಳು ಪದವಿ ಮುಗಿಸಿದ್ದಾರೆ, ಆದರೆ ಕೇವಲ ಒಂದೂವರೆ ಸಾವಿರ ವಿದ್ಯಾರ್ಥಿಗಳು ಮಾತ್ರ ಉನ್ನತ ವ್ಯಾಸಂಗಕ್ಕೆ ಸೇರಿದ್ದಾರೆ, ಉಳಿದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸಬೇಕಾಗುತ್ತದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು ಜಿಲ್ಲೆಯು ಉದ್ಯೋಗ ಮೇಳಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದರು. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಕನಿಷ್ಠ ಎರಡು ಬಾರಿ ಬೃಹತ್ ಉದ್ಯೋಗ ಮೇಳವನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗ ಅಧಿಕಾರಿ ಕಿಶೋರ್ ಕುಮಾರ್, ಜಿಲ್ಲಾಕೌಶಲ್ಯಾಭಿವೃದ್ಧಿ ಅಧಿಕಾರಿ ಟಿ.ಕೆ.ಕೆಂಪಯ್ಯ, ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೆಸ್ವಾಮಿ, ಹಿರಿಯ ಪ್ರಾಧ್ಯಾಪ ಪ್ರೊ.ರಮೇಶ್ ಬಿ.ಇನ್ನಿತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))