ಸಾರಾಂಶ
ಹಾನಗಲ್ಲ: ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮವರ್ಷಾಚರಣೆ ಅಂಗವಾಗಿ ಇಲ್ಲಿನ ಗುರುಭವನದಲ್ಲಿನ ಉದ್ಯೋಗ ಸಮೃದ್ಧಿ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 55 ಯುವಕ, ಯುವತಿಯರಿಗೆ ಸ್ಥಳದಲ್ಲೇ ಉದ್ಯೋಗದ ಆದೇಶಪತ್ರ ನೀಡಲಾಯಿತು.
ಮೇಳದಲ್ಲಿ ತಾಲೂಕಿನ ಎಸ್‌ಎಸ್‌ಎಲ್‌ಸಿ ಪಾಸ್, ದ್ವಿತೀಯ ಪಿಯುಸಿ ಪಾಸ್/ಫೇಲ್, ಐಟಿಐ, ಡಿಪ್ಲೊಮಾ ಆದ 135 ಯುವಕ, ಯುವತಿಯರು ನೋಂದಣಿ ಮಾಡಿಕೊಂಡಿದ್ದರು. ಜಪಾನ್ ಮೂಲದ ಎಂಎನ್‌ಸಿ ಕಂಪನಿ ಯಜೂಕಿ ಇಂಡಿಯಾ ಪ್ರೈವೇಟ್ ಲಿ.ನ ಮುಖ್ಯಸ್ಥರು ಸಂದರ್ಶನ ಕೈಗೊಂಡು 55 ಯುವಕ, ಯುವತಿಯರಿಗೆ ಉದ್ಯೋಗ ನೇಮಕಾತಿ ಆದೇಶಪತ್ರ ನೀಡಿದರು.ಮೇಳ ಉದ್ಘಾಟಿಸಿದ ಲಯಮ್ ಸಂಸ್ಥೆಯ ಮುಖ್ಯಸ್ಥೆ ಶಾಲಿನಿ ಮಾತನಾಡಿ, ಪ್ರತಿಯೊಬ್ಬರಲ್ಲಿ ಸಹ ಒಂದಿಲ್ಲೊಂದು ಕೌಶಲ ಇರುತ್ತದೆ. ಅದನ್ನು ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದೆ. ನಮ್ಮೊಳಗಿರುವ ಆಸಕ್ತಿಗೆ ತಕ್ಕಂತೆ ಕೆಲಸ ಮಾಡಬೇಕು. ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳ ಲಾಭ ಪಡೆದುಕೊಂಡು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು ಎಂದರು.
ಬೆಂಗಳೂರು ಸೇರಿದಂತೆ ದೇಶ ಮತ್ತು ರಾಜ್ಯದ ಬೇರೆ, ಬೇರೆ ನಗರಗಳಲ್ಲಿನ ಪ್ರತಿಷ್ಠಿತ ಕಂಪನಿಗಳನ್ನು ಕರೆತಂದು ತಾಲೂಕಿನ ಉದ್ಯೋಗಾಕಾಂಕ್ಷಿ ಯುವ ಸಮುದಾಯಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರ ಮಾರ್ಗದರ್ಶನದಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದರು.ಪರಿವರ್ತನ ಕಲಿಕಾ ಕೇಂದ್ರದ ಆಡಳಿತಾಧಿಕಾರಿ ಮಾರುತಿ ಶಿಡ್ಲಾಪೂರ ಮಾತನಾಡಿ, ಶಾಸಕ ಶ್ರೀನಿವಾಸ ಮಾನೆ ಅವರ ಮಾರ್ಗದರ್ಶನದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟು 6 ಉದ್ಯೋಗ ಮೇಳ ಆಯೋಜಿಸಿ, 2 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವಕಾಶ ಕಲ್ಪಿಸಲಾಗಿದೆ. ಉದ್ಯೋಗ ಸಮೃದ್ಧಿ ಕೇಂದ್ರ ತೆರೆದು ಉದ್ಯೋಗಾಕಾಂಕ್ಷಿಗಳ ನಿರಂತರ ನೋಂದಣಿ ಕೈಗೊಂಡು ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಲಾಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು.
ಲಯಮ್ ಸಂಸ್ಥೆಯ ಅಧಿಕಾರಿಗಳಾದ ಪವನ, ವಿಕ್ರಂ, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಪ್ರಹ್ಲಾದ್ ಸಾಂಬ್ರಾಣಿ ಉಪಸ್ಥಿತರಿದ್ದರು.ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಹಾವೇರಿ: ತಾಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಸೇರಿದ 16 ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಂದು ವಸತಿ ಶಾಲೆ 1ನೇ ತರಗತಿಯಿಂದ 5ನೇ ತರಗತಿಯವರೆಗೆ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಮತ್ತು ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿನಿಲಯಗಳಿಗೆ ಎಸ್ಸೆಸ್ಸೆಲ್ಸಿ ನಂತರದ ತರಗತಿಗಳ ವಿವಿಧ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗುವುದು.ಅರ್ಜಿ ಸಲ್ಲಿಸಲು ವಿದ್ಯಾರ್ಥಿ ಮತ್ತು ತಂದೆ- ತಾಯಿಯ ಆಧಾರ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕಳೆದ ವರ್ಷದ ಅಂಕಪಟ್ಟಿ, ಕಾಲೇಜಿನ ರಜಿಸ್ಟರ್ ನಂಬರ್, ಬ್ಯಾಂಕ್ ಪಾಸ್‌ಬುಕ್ ಮತ್ತು ಪಾಸ್ ಪೋರ್ಟ್ ಸೈಜ್ ಕಲರ್ ಫೋಟೊ ಅವಶ್ಯವಿರುತ್ತದೆ. ಮೀಸಲಾತಿ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳ ಆಯ್ಕೆ ಮಾಡಲಾಗುವುದು.ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಸಲ್ಲಿಸಿದ ಅರ್ಜಿಗಳನ್ನು ಮೆರಿಟ್ ಆಧಾರದ ಮೇಲೆ ಆದ್ಯತೆಯನ್ನು ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಆನ್‌ಲೈನಲ್ಲಿ ಸಲ್ಲಿಸಿದ ಸಲ್ಲಿಸಿದ ಅರ್ಜಿಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಹಾವೇರಿ ಕಚೇರಿಗೆ ಸಲ್ಲಿಸಬೇಕು ಹಾಗೂ ವಸತಿ ಶಾಲೆಯ ಪ್ರವೇಶ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯದಲ್ಲಿ ಪಡೆಯಬಹುದು.