ಪ್ರತಿಯೊಬ್ಬರು ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ಡಾ.ಸ್ಮಿತಾರಾಮು

| Published : Jan 26 2025, 01:34 AM IST

ಪ್ರತಿಯೊಬ್ಬರು ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ಡಾ.ಸ್ಮಿತಾರಾಮು
Share this Article
  • FB
  • TW
  • Linkdin
  • Email

ಸಾರಾಂಶ

ಜನರು ತಮ್ಮ ಒಂದು ಮತದಿಂದ ಏನು ಆಗದು ಎಂದು ಉದಾಸೀನ ಮನೋಭಾವ ತೊರಬಾರದು. ಕೇವಲ ಒಂದು ಮತಕ್ಕೆ ಇಡೀ ದೇಶದ ಚಿತ್ರಣವನ್ನು ಬದಲಿಸುವ ಶಕ್ತಿ ಇದೆ ಎನ್ನುವ ಸತ್ಯವನ್ನು ಅರಿತು ಮತದಾನದಲ್ಲಿ ಪಾಲ್ಗೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಮತದಾನ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿದು ಪ್ರತಿಯೊಬ್ಬರು ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ತಹಸೀಲ್ದಾರ್ ಡಾ.ಸ್ಮಿತಾ ರಾಮು ಶನಿವಾರ ಹೇಳಿದರು.

ಪಟ್ಟಣದ ತಾಲೂಕ ಕಚೇರಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಹಾಗೂ ತಹಸೀಲ್ದಾರ್ ಕಾರ್ಯಾಲಯ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಜನರು ತಮ್ಮ ಒಂದು ಮತದಿಂದ ಏನು ಆಗದು ಎಂದು ಉದಾಸೀನ ಮನೋಭಾವ ತೊರಬಾರದು. ಕೇವಲ ಒಂದು ಮತಕ್ಕೆ ಇಡೀ ದೇಶದ ಚಿತ್ರಣವನ್ನು ಬದಲಿಸುವ ಶಕ್ತಿ ಇದೆ ಎನ್ನುವ ಸತ್ಯವನ್ನು ಅರಿತು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.

ಭಾರತದ ಸಂವಿಧಾನದಲ್ಲಿ ಮತದಾನಕ್ಕೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಹಕ್ಕು ನೀಡಲಾಗಿದೆ. ಆದರೆ, 18ರಿಂದ 24 ವರ್ಷ ವಯಸ್ಸಿನ ಯುವಕರು ಮತದಾನದಲ್ಲಿ ಹೆಚ್ಚಿನ ಆಸಕ್ತಿ ವಹಿಸದೆ ಇರುವುದು ಬೇಸರದ ಸಂಗತಿ. ಯುವಕರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ತಿಳಿದು ತಮ್ಮ ಹಕ್ಕು ಚಲಾಯಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಟಿ.ನಾರಾಯಣ ಪ್ರತಿಜ್ಞಾವಿಧಿ ಬೋಧಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ.ಸಿ.ಜಯವರ್ಧನ್ ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ 254 ಮತಗಟ್ಟೆಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಶ್ರೀನಿವಾಸ್, ಹೇಮಾ ಹಾಗೂ ಸುಶೀಲಮ್ಮ ಅವರುಗಳಿಗೆ ಪ್ರಶಂಷ ಪತ್ರ ನೀಡಿ ಅಭಿನಂದಿಸಲಾಯಿತು. ಬಿಇಒ ಸಿ.ಎಚ್.ಕಾಳೀರಯ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎ.ಸಿ.ಗೀತಾ ಜೋಗಿಗೌಡ, ಪುರಸಭೆ ಮುಖ್ಯ ಅಧಿಕಾರಿ ಎಂ.ಮೀನಾಕ್ಷಿ, ಚುನಾವಣೆ ಶಾಖೆ ಶಿರಸ್ತೇದಾರ್ ರೂಪ, ಚುನಾವಣಾ ವಿಷಯ ನಿರ್ವಾಹಕ ಪವನ್ ಇದ್ದರು.