ಸಾರಾಂಶ
ಅತ್ತಿಮಬ್ಬೆ ಮಹಾದ್ವಾರದಿಂದ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಸಚಿವ ಎಚ್.ಕೆ.ಪಾಟೀಲ,ಸಿದ್ದು ಪಾಟೀಲ ರೋಡ ಶೋ ಮೂಲಕ ಮತಯಾಚನೆ
ಗದಗ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ಮಹಿಳೆಯರಿಗೆ ಬಲ ಬಂದಿದ್ದು, ಲಕ್ಷ್ಮೀಯರನ್ನು ಮಹಾಲಕ್ಷ್ಮೀಯರನ್ನಾಗಿ ಮಾಡಲು ಕಾಂಗ್ರೆಸ್‌ನಿಂದ ವರ್ಷಕ್ಕೆ ₹1 ಲಕ್ಷ ನೀಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.ಅಭ್ಯರ್ಥಿ ಸಂಯುಕ್ತಾ ಪಾಟೀಲ, ಮಾಜಿ ಶಾಸಕ ಬಿ.ಆರ್. ಯಾವಗಲ್ಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ಖಂಡಿಸಿದರು.
ಬಿಜೆಪಿ ಮುಖಂಡ ಅಜ್ಜಪ್ಪಗೌಡ ಪಾಟೀಲ, ಗ್ರಾಪಂ ಮಾಜಿ ಸದಸ್ಯ ಶಿವನಗೌಡ ಗೌಡ್ರ, ಶ್ರೀಶೈಲಪ್ಪ ಹಗರಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಇದಕ್ಕೂ ಪೂರ್ವ ಅತ್ತಿಮಬ್ಬೆ ಮಹಾದ್ವಾರದಿಂದ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಸಚಿವ ಎಚ್.ಕೆ.ಪಾಟೀಲ,ಸಿದ್ದು ಪಾಟೀಲ ರೋಡ ಶೋ ಮೂಲಕ ಮತಯಾಚನೆ ಮಾಡಿದರು.ಗ್ರಾಪಂ ಅಧ್ಯಕ್ಷ ಕೆ.ಎಸ್. ಪೂಜಾರ, ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿವೇಕ ಯಾವಗಲ್, ವಿದ್ಯಾಧರ ದೊಡ್ಡಮನಿ, ಪ್ರಕಾಶ ಕರಿ, ನೀಲಮ್ಮ ಬೋಳನವರ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಜಿಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಸ್ವಾಗತಿಸಿದರು. ನಜೀರಅಹ್ಮದ ಕಿರೀಟಗೇರಿ ನಿರೂಪಿಸಿ ವಂದಿಸಿದರು.