ಸಾರಾಂಶ
ಹಾವೇರಿ: ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಮಹಿಳೆಯರಿಗೆ ಶಕ್ತಿ ತುಂಬಿದ್ದು, ಇದರಲ್ಲಿ ಯಾವುದೇ ಅನುಮಾನವಿಲ್ಲ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಕ್ತಿ ಯೋಜನೆಯಡಿ ಪ್ರತಿದಿನ ಬಸ್‌ನಲ್ಲಿ ಪ್ರಯಾಣಿಸುವ ಮಹಿಳಾ ಕೂಲಿ ಕಾರ್ಮಿಕರು, ಗಾರ್ಮೆಂಟ್‌ಗೆ ತೆರಳುವರು ಪ್ರತಿ ತಿಂಗಳು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದ ಹಣ ಉಳಿತಾಯವಾಗುತ್ತಿದ್ದು, ಎರಡು ಸಾವಿರ ರು. ಉಳಿಸಿದರೂ ಇದು ಮನೆ ನಿರ್ವಹಣೆಗೆ ಸಹಾಯಕವಾಗುತ್ತಿದೆ. ಶಕ್ತಿ ಯೋಜನೆ, ಗ್ಯಾರಂಟಿ ಯೋಜನೆ ಎಲ್ಲವು ಮಹಿಳೆಯರ ಸಬಲೀಕರಣಕ್ಕಾಗಿ ಮಾಡಲಾಗಿದೆ. ಶಕ್ತಿ ಯೋಜನೆಯಿಂದ ಬೇರೆಯವರಿಗೆ ತೊಂದರೆ ಆಗುತ್ತೆ ಎನ್ನುವುದು ತಪ್ಪಾಗುತ್ತೆ ಎಂದರು.ಆ. 7ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಮಹಿಳೆಯರ ರಕ್ಷಣೆ, ಸಬಲೀಕರಣ, ಮೂಲ ಸೌಕರ್ಯಗಳು, ಸರ್ಕಾರದ ಯೋಜನೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಸಮಸ್ಯೆಗಳನ್ನು ಹೊತ್ತು ಬರುವ ಮಹಿಳೆಯರಿಗೆ ಅಧಿಕಾರಿಗಳ ಸಮ್ಮುಖದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಮೂಲ ಸೌಕರ್ಯಗಳಿಲ್ಲ, ಶೌಚಾಲಯ ಇಲ್ಲ. ಬಹಳಷ್ಟು ವಿಧವೆಯರಿದ್ದಾರೆ. ಸರ್ಕಾರದಿಂದ ಅವರಿಗೆ ಉಚಿತವಾಗಿ ಮನೆಗಳನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಎಷ್ಟು ಗ್ರಾಮಗಳಲ್ಲಿ ಎಷ್ಟು ವಿಧವೆಯರಿಗೆ ಮನೆ ನೀಡಲಾಗಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇನೆ. ಬಾಲ್ಯವಿವಾಹ, ಬಾಲಗರ್ಭಿಣಿಯರು, ಪೋಕ್ಸೋ ಕೇಸ್, ಅತ್ಯಾಚಾರ ಪ್ರಕರಣಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.ರಾಣಿಬೆನ್ನೂರು ತಾಲೂಕಿನಲ್ಲಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಸಂತ್ರಸ್ತ ಮಹಿಳೆಯರು ನ್ಯಾಯ ಸಿಕ್ಕಿಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ಗಮನದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ತನಿಖಾ ಸಮಿತಿ ರಚಿಸಿಲಾಗಿತ್ತು, ತನಿಖೆ ನಡೆದು ನ್ಯಾಯಾಲಯದಿಂದ ತೀರ್ಪು ಬಂದಿದೆ. ಈಗ ನಾವು ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಸಂತ್ರಸ್ತ ಮಹಿಳೆಯರು ಕೂಡ ಮಹಿಳಾ ಆಯೋಗಕ್ಕೆ ಬಂದಿದ್ದರು. ನಾನು ಮಾಡಬೇಕಾದ ಎಲ್ಲ ಕೆಲಸಗಳನ್ನು ಮಾಡಿದೆ. ಆದರೂ ಅವರಿಗೆ ಪರಿಹಾರ ಸಿಕ್ಕಿಲ್ಲ. ಈ ಬಗ್ಗೆ ವಿಚಾರಿಸಲಾಗುವುದು ಎಂದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))