ಮಹರ್ಷಿ ವಾಲ್ಮೀಕಿ ಅವರು ತಮ್ಮ ಜೀವನ ಮತ್ತು ಸಾಹಿತ್ಯದ ಮೂಲಕ ಸಮಾಜಕ್ಕೆ ಉನ್ನತ ಆದರ್ಶಗಳನ್ನು ನೀಡಿದ್ದಾರೆ. ರಾಮಾಯಣದ ಸಂದೇಶಗಳು ಸತ್ಯ, ಧರ್ಮ, ಮಾನವೀಯತೆ ಹಾಗೂ ಕರ್ತವ್ಯಪ್ರಜ್ಞೆಯ ಮಹತ್ವ ಸಾರುತ್ತವೆ. ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆ ಮತ್ತು ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಹೇಳಿದರು.
ಬಂಟ್ವಾಳ : ಮಹರ್ಷಿ ವಾಲ್ಮೀಕಿ ಅವರು ತಮ್ಮ ಜೀವನ ಮತ್ತು ಸಾಹಿತ್ಯದ ಮೂಲಕ ಸಮಾಜಕ್ಕೆ ಉನ್ನತ ಆದರ್ಶಗಳನ್ನು ನೀಡಿದ್ದಾರೆ. ರಾಮಾಯಣದ ಸಂದೇಶಗಳು ಸತ್ಯ, ಧರ್ಮ, ಮಾನವೀಯತೆ ಹಾಗೂ ಕರ್ತವ್ಯಪ್ರಜ್ಞೆಯ ಮಹತ್ವ ಸಾರುತ್ತವೆ. ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆ ಮತ್ತು ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಹೇಳಿದರು.ಬಂಟ್ವಾಳ ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬಿಸಿರೋಡಿನ ಅಂಬೇಡ್ಕರ್ ಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಟ್ಲದ ರಾಧಾಕೃಷ್ಣ ಕಲ್ಚಾರ್ ಅವರು ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಧನೆ ಹಾಗೂ ವಿಚಾರಧಾರೆಗಳ ಕುರಿತು ಉಪನ್ಯಾಸ ನೀಡಿದರು.ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್, ಉಪತಹಸೀಲ್ದಾರ್ ನರೇಂದ್ರ, ತಾಲೂಕು ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಇದ್ದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿನಯ ಕುಮಾರಿ ಸ್ವಾಗತಿಸಿದರು. ಭವ್ಯ ನಿರೂಪಿಸಿದರು. ಪ್ರಸಾದ್ ವಂದಿಸಿದರು.