ಕೃಷಿ ತಳಿ ಸಂಶೋಧನೆ, ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಉತ್ತೇಜನ ನೀಡಿ

| Published : Dec 15 2023, 01:30 AM IST

ಕೃಷಿ ತಳಿ ಸಂಶೋಧನೆ, ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಉತ್ತೇಜನ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕೃಷಿ ತಳಿ ಸಂಶೋಧನಾ ಚಟುವಟಿಕೆ ಹಾಗೂ ಮೆಣಸಿನಕಾಯಿ, ಮೆಕ್ಕೆಜೋಳ ಹಾಗೂ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಆಧಾರಿತ ಸಣ್ಣ ಕೈಗಾರಿಕಾ ಘಟಕಗಳು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆರಂಭಿಸುವ ಕುರಿತಂತೆ ರೈತರಿಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ಉತ್ತೇಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಕೃಷಿ ಆಧಾರಿತ ಆಹಾರ ಸಂಸ್ಕರಣೆ, ತಳಿ ಅಭಿವೃದ್ಧಿಯಂತಹ ಚಟುವಟಿಕೆಗೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಿದ್ದಾರೆ.

ಹಾವೇರಿ: ಕೃಷಿ ತಳಿ ಸಂಶೋಧನಾ ಚಟುವಟಿಕೆ ಹಾಗೂ ಮೆಣಸಿನಕಾಯಿ, ಮೆಕ್ಕೆಜೋಳ ಹಾಗೂ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಆಧಾರಿತ ಸಣ್ಣ ಕೈಗಾರಿಕಾ ಘಟಕಗಳು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆರಂಭಿಸುವ ಕುರಿತಂತೆ ರೈತರಿಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ಉತ್ತೇಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಕೃಷಿ ಆಧಾರಿತ ಆಹಾರ ಸಂಸ್ಕರಣೆ, ತಳಿ ಅಭಿವೃದ್ಧಿಯಂತಹ ಚಟುವಟಿಕೆಗೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸೂಕ್ತ ಯೋಜನೆ ರೂಪಿಸಲು ನಬಾರ್ಡ್‌ ಅಧಿಕಾರಿಗಳು ಹಾಗೂ ತೋಟಗಾರಿಕೆ ವಿಶ್ವ ವಿದ್ಯಾಲಯ, ಕೃಷಿ, ತೋಟಗಾರಿಕೆ ಹಾಗೂ ಕೈಗಾರಿಕಾ ಇಲಾಖಾ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಸವಣೂರಿನಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪನೆಗೆ ಕನಿಷ್ಠ ೫೦ಎಕರೆ ಜಮೀನು ಗುರುತಿಸುವ ನಿಟ್ಟಿನಲ್ಲಿ ಕೆ.ಎ.ಎಸ್.ಎಸ್.ಐ.ಡಿ.ಸಿ. ಹಾಗೂ ತಾಲೂಕಿನ ತಹಸೀಲ್ದಾರ್‌ ಜತೆಗೆ ಜಂಟಿ ಸಭೆ ನಡೆಸಿ ಕ್ರಮ ವಹಿಸುವಂತೆ ಸೂಚನೆ ನೀಡಿದರು. ಸವಣೂರ, ರಾಣಿಬೆನ್ನೂರು ಎರಡನೇ ಹಂತ ಹಾಗೂ ಹಿರೇಕೆರೂರಿನ ಕೈಗಾರಿಕಾ ವಸಾಹಾತುಗಳಲ್ಲಿ ಹಾಗೂ ಸವಣೂರಿನ ಕೈಗಾರಿಕಾ ವಸಾಹತುವಿನಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕುರಿತಂತೆ ತ್ವರಿತವಾಗಿ ಪ್ರಕ್ರಿಯೆ ಕೈಗೊಳ್ಳಲು ಸೂಚನೆ ನೀಡಿದರು.

ಹೊಸ ಕೈಗಾರಿಕಾ ಪ್ರಸ್ತಾವನೆ: ಸವಣೂರ ಕೈಗಾರಿಕಾ ವಲಯದಲ್ಲಿ ಜನರಲ್ ಎಂಜಿನಿಯರಿಂಗ್ ಹಾಗೂ ವುಡನ್ ವರ್ಕ್ ಘಟಕ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ರಾಣಿಬೆನ್ನೂರ ಹಾಗೂ ಬ್ಯಾಡಗಿಯಲ್ಲಿ ರೆಡಿಮೇಡ್ ಗಾರ್ಮೆಂಟ್ಸ್ ಸ್ಥಾಪನೆಗೆ ಸ್ವೀಕೃತವಾದ ಪ್ರಸ್ತಾವನೆಗಳನ್ನು ಸಭೆಗೆ ಮಂಡಿಸಲಾಯಿತು. ಈ ಕೈಗಾರಿಕಾ ಘಟಕಗಳಿಗೆ ಮಂಜೂರಾತಿಗಾಗಿ ಅಗತ್ಯವಾದ ನಿಯಮಾವಳಿ ಪೂರೈಕೆಗೆ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದರು.

ಸಭೆಗೆ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿನಾಯಕ ಜೋಶಿ ವಿಷಯ ಮಂಡನೆ ಮಾಡಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ್ ಶ್ರೀಧರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಶಾಖಾ ವ್ಯವಸ್ಥಾಪಕರು, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು, ನಬಾರ್ಡ್ ಡಿಜಿಎಂ, ಮಾಲಿನ್ಯ ನಿಯಂತ್ರಣ ಅಧಿಕಾರಿಗಳು, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ರಾಣಿಬೆನ್ನೂರ ಪೌರಾಯುಕ್ತರು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.