ಮಕ್ಕಳಿಗೆ ನಿಖರವಾಗಿ ಓದುವಂತಹ ಚಟುವಟಿಕೆ ನೀಡಿ ಶೈಕ್ಷಣಿಕವಾಗಿ ಉತ್ತೇಜಿಸುವ ಗುರಿ ಜೊತೆಗೆ ಪೋಷಕರು ಮತ್ತು ಮಕ್ಕಳ ಸಹ ಸಂಬಂಧ ಜೊತೆ ಜೊತೆಯಲಿ ಸಾಗಬೇಕು ಕಲಿಕೆ ಮಗುವಿನ ದೃಢತೆ ಯಾಗಬೇಕು ಎಂಬ ಉದ್ದೇಶದಿಂದ ಕಲಿಕಾ ಹಬ್ಬ ಆಚರಿಸಲಾಗುತ್ತಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಎಚ್.ಜಿ. ಮಂಜುನಾಥ್ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ
ಮಕ್ಕಳಿಗೆ ನಿಖರವಾಗಿ ಓದುವಂತಹ ಚಟುವಟಿಕೆ ನೀಡಿ ಶೈಕ್ಷಣಿಕವಾಗಿ ಉತ್ತೇಜಿಸುವ ಗುರಿ ಜೊತೆಗೆ ಪೋಷಕರು ಮತ್ತು ಮಕ್ಕಳ ಸಹ ಸಂಬಂಧ ಜೊತೆ ಜೊತೆಯಲಿ ಸಾಗಬೇಕು ಕಲಿಕೆ ಮಗುವಿನ ದೃಢತೆ ಯಾಗಬೇಕು ಎಂಬ ಉದ್ದೇಶದಿಂದ ಕಲಿಕಾ ಹಬ್ಬ ಆಚರಿಸಲಾಗುತ್ತಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಎಚ್.ಜಿ. ಮಂಜುನಾಥ್ ಹೇಳಿದರು.ಅವರು ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಬೋರಜ್ಜಿ ಹಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಕಲಿಕಾ ಹಬ್ಬ ಹಾಗೂ ಸರಕಾರಿ ಶಾಲೆಯ ೨೫ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕ್ರಿಯೆಗಳನ್ನು ಅಭಿವ್ಯಕ್ತಿ ಮಾಡಿ ಬಹುಮಾನ ಪಡೆದು ಮಕ್ಕಳು ಉಲ್ಲಾಸ ಶೈಕ್ಷಣಿಕ ಯಶಸ್ಸು ಸಾಧ್ಯ ಇದಕ್ಕೆ ಕಲಿಕಾ ಹಬ್ಬ ಪೂರಕ ವಾತಾವರಣ ಕಲ್ಪಿಸಿದೆ ಎಂದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಈರಣ್ಣ ಮಾತನಾಡಿ, ನಮ್ಮೂರ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ದೊರೆಯುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿ ಶ್ರದ್ಧೆಯಿಂದ ಕಲಿತು ಶೈಕ್ಷಣಿಕ ಯಶಸ್ಸು ಸಾಧಿಸಬೇಕು. ಶಿಕ್ಷಣ ಒಂದೇ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ರೇಣುಕಮ್ಮ, ಶಿಕ್ಷಕರಾದ ಎಂ.ಜಿ.ದೇವರಾಜು, ಎನ್. ಕೆ. ಮಂಜುಳಾ, ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ರೂಪ, ಭೂ ದಾನಿಗಳಾದ ರಾಮಣ್ಣ, ಶಿಕ್ಷಕರಾದ ಕರಿಯಪ್ಪ, ಪಿ.ನಾಗರಾಜು, ಎಂ.ಕೆ ಮಂಜುಳಾ, ಕೆ.ರಮೇಶ್, ಜಿ. ಮಂಜುಳಾ ರವರಿಗೆ ಗುರುವಂದನೆ ಸಲ್ಲಿಸಲಾಯಿತು. ಕಲಿಕಾ ಹಬ್ಬದಲ್ಲಿ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಜರಿದ್ದರು.