ಸಾರಾಂಶ
ಮತದಾನ ಮಾಡಲು ಅರ್ಹತೆ ಪಡೆದ ವಿದ್ಯಾರ್ಥಿಗಳು ತಪ್ಪದೆ ಮತದಾನ ಮಾಡುವ ಜೊತೆಗೆ ಸ್ನೇಹಿತರು, ಕುಟುಂಬದವರನ್ನು ಕಡ್ಡಾಯ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್. ನಾರಾಯಣ ಹೇಳಿದರು.
ಹಿರೇಕೆರೂರು: ಮತದಾನ ಮಾಡಲು ಅರ್ಹತೆ ಪಡೆದ ವಿದ್ಯಾರ್ಥಿಗಳು ತಪ್ಪದೆ ಮತದಾನ ಮಾಡುವ ಜೊತೆಗೆ ಸ್ನೇಹಿತರು, ಕುಟುಂಬದವರನ್ನು ಕಡ್ಡಾಯ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್. ನಾರಾಯಣ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಲೋಕಸಭೆ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡ ಚುನಾವಣೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮತದಾನ ಹಕ್ಕಾಗಿದ್ದು ಪ್ರತಿಯೊಬ್ಬ ಅರ್ಹರು ತಪ್ಪದೆ ಮತ ಚಲಾಯಿಸುವ ಮೂಲಕ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ ಸದೃಢ ಭಾರತ ನಿರ್ಮಾಣ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಪಿ. ಗೌಡರ ಅವರು ಮಾತನಾಡಿ, ಮತದಾನ ಮಾಡುವುದರ ಮೂಲಕ ವಿದ್ಯಾರ್ಥಿಗಳಾದ ನೀವು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೆ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಅಕ್ಷರ ದಾಸೋಹ ನಿರ್ದೇಶಕ ಮಾರುತೆಪ್ಪ, ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೋಡಿ ಭೀಮರಾಯ, ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಿ. ಹರೀಶ್, ಗೀತಾ ಎಂ., ಪ್ರಾಧ್ಯಾಪಕರಾದ ಎಂ.ಬಿ. ಬದನೆಕಾಯಿ, ರಾಮಚಂದ್ರಪ್ಪ ಬಿ.ಎಂ., ನವೀನ ಎಂ., ಹೇಮಲತಾ ಕೆ., ಹೇಮಾ ಯರಗುಂಟಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.