ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು ಕಂದಾಯ ಇಲಾಖೆಯಲ್ಲಿ ಲಭ್ಯವಿರುವ ಭೂ ಜಾಗವನ್ನು ಕೈಗಾರಿಕಾ ಇಲಾಖೆಗೆ ಹಸ್ತಾಂತರಿಸುವಂತೆ ಹಾಗೂ ಮಳವಳ್ಳಿ ತಾಲೂಕಿನಲ್ಲಿ ೫೬೩ ಎಕರೆ ಜಾಗವನ್ನು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಗುರುತಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕಾ ವಸಾಹತುಗಳು ಅಭಿವೃದ್ಧಿಗೆ ಕಾರ್ಯಯೋಜನೆ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಗಮಂಗಲ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸುವಂತೆ ಸಲಹೆ ನೀಡಿದರು.
ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು ಕಂದಾಯ ಇಲಾಖೆಯಲ್ಲಿ ಲಭ್ಯವಿರುವ ಭೂ ಜಾಗವನ್ನು ಕೈಗಾರಿಕಾ ಇಲಾಖೆಗೆ ಹಸ್ತಾಂತರಿಸುವಂತೆ ಹಾಗೂ ಮಳವಳ್ಳಿ ತಾಲೂಕಿನಲ್ಲಿ ೫೬೩ ಎಕರೆ ಜಾಗವನ್ನು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಗುರುತಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕಾ ವಸಾಹತುಗಳು ಅಭಿವೃದ್ಧಿಗೆ ಕಾರ್ಯಯೋಜನೆ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್ ಸೇರಿದಂತೆ ಇತರರಿದ್ದರು.