ಸಾರಾಂಶ
ಉಡುಪಿ: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ ನಮ್ಮ ಭಾರತ, ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಸಾಧನೆಯನ್ನು ಮುಂದುವರೆಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರು. 15 ಲಕ್ಷ ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ಮಣಿಪಾಲ ಸರಳಬೆಟ್ಟುವಿನ ಕೃಷ್ಣಪ್ಪ ಸಾಮಂತ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರಸಭಾ ಸದಸ್ಯೆ ವಿಜಯಲಕ್ಷ್ಮೀ, ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸಿ ರೆಬೆಲ್ಲೋ, ಮಣಿಪಾಲ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷ ಗಣೇಶ್ ಪ್ರಭು, ಉಪಾಧ್ಯಕ್ಷ ಗುರುದತ್ತ ಮಲ್ಯ, ಉದಯವಾಣಿಯ ನಿವೃತ್ತ ಸಂಪಾದಕ ನಿತ್ಯಾನಂದ ಪಡ್ರೆ. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಟರಾಜ್ ಕಾಮತ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ್ ಜಂಬಗಿ, ಸ್ಥಳೀಯ ಪ್ರಮುಖರಾದ ಗುರುರಾಜ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))