ಸಾರಾಂಶ
ಹರಪನಹಳ್ಳಿ: ಮಕ್ಕಳನ್ನು ಸೈನಕ್ಕೆ ಸೇರಿಸಿ ದೇಶ ಸೇವೆಗೆ ಪ್ರೋತ್ಸಾಹಿಸಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.ಅವರು ಪಟ್ಟಣದ ಸ್ಡೇಡಿಯಂನಲ್ಲಿ ತಾಲೂಕು ಆಡಳಿತದಿಂದ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಇದೆ ಎಂದು ದುರುಪಯೋಗ ಪಡಿಸಿಕೊಳ್ಳದೇ ಸದುಪಯೋಗ ಪಡಿಸಿಕೊಂಡು ತಾವು ಅಭಿವೃದ್ಧಿ ಹೊಂದಿ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಅವರು ತಿಳಿಸಿದರು.ಶಾಂತಿ, ಕ್ರಾಂತಿ ಎಂಬ ಎರಡು ರೀತಿಯಲ್ಲಿ ಹೋರಾಟ ಗೈದು ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಅವರ ಹೋರಾಟ ಸ್ಮರಣೀಯ ಎಂದು ಹೇಳಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಲಕ್ಷಾಂತರ ಜನರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ನಂತರ ಬಲಿಷ್ಠ ಸಂವಿಧಾನ ಮೂಲಕ ದೇಶ ಅಭಿವೃದ್ಧಿ ಪಥದಲ್ಲಿ ಸಾಗಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಸದಸ್ಯ ಅಬ್ದುಲ್ ರಹಿಮಾನ್ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದೇ ಪ್ರಥಮ ಬಾರಿಗೆ ತೆರೆದ ವಾಹನದಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಧ್ವಜ ವಂದನೆ ಸ್ವೀಕರಿಸಿದರು.ತಹಶೀಲ್ದಾರ ಬಿ.ವಿ.ಗಿರೀಶಬಾಬು, ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ನಾಗರಾಜ ಎಂ.ಕಮ್ಮಾರ, ಪಿಎಸ್ ಐ ಶಂಭುಲಿಂಗ ಹಿರೇಮಠ, ಪುರಸಭಾ ಸದಸ್ಯರಾದ ಟಿ.ವೆಂಕಟೇಶ, ಲಾಟಿ ದಾದಾಪೀರ, ಗೊಂಗಡಿ ನಾಗರಾಜ, ಉದ್ದಾರ ಗಣೇಶ, ಮಂಜುನಾಥ ಇಜಂತಕರ್, ಜಾಕೀರ್ ಹುಸೇನ್, ಭರತೇಶ, ಭೀಮವ್ವ, ಮುಖಂಡರಾದ ಹುಲ್ಲಿಕಟ್ಟಿ ಚಂದ್ರಪ್ಪ, ಮೈದೂರು ರಾಮಣ್ಣ, ಬಿಇಒ ಬಸವರಾಜಪ್ಪ, ತಾಪಂ ಇಒ ಚಂದ್ರಶೇಖರ, ವಿಜಯಲಕ್ಷ್ಮಿ ಹತ್ತಿಕಾಳು, ಕೃಷಿ ಎ.ಡಿ ಉಮೇಶ, ಎಇಇ ಕಿರಣ ನಾಯ್ಕ, ಉದಯ ಶಂಕರ, ದೈಹಿಕ ಶಿಕ್ಷಣ ಪರಿವೀಕ್ಷಕ ಷಣ್ಮುಖಪ್ಪ, ಶಿಕ್ಷಣ ಸಂಯೋಜಕ ಗಿರಜ್ಜಿ ಮಂಜುನಾಥ, ಇಸ್ಮಾಯಿಲ್ ಎಲಿಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.