ಮಹಾನಗರ ಪಾಲಿಕೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ

| Published : Dec 01 2024, 01:32 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮಹಾನಗರ ಪಾಲಿಕೆಯಿಂದ ವಾರ್ಡ್‌ ನಂ.೧೩ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‌ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು ತೆರವುಗೊಳಿಸಲಾಯಿತು. ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಮಹಾನಗರ ಪಾಲಿಕೆಯಿಂದ ವಾರ್ಡ್‌ ನಂ.೧೩ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‌ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು ತೆರವುಗೊಳಿಸಲಾಯಿತು.ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‌ಆರ್‌ಟಿಸಿ ಡಿಪೋ ಪಕ್ಕ, ಪ್ರವಾಸೋದ್ಯಮ ಮಂದಿರದ ಹಿಂದುಗಡೆ, ಸೈನಿಕ ಶಾಲೆ ರಸ್ತೆಯ ಜಿಮಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರಸ್ತೆಯಲ್ಲಿ ಜಿಲ್ಲಾ ಕ್ರೀಡಾಂಗಣದ ಹತ್ತಿರ ವೆಂಡಿಂಗ್ ಜೋನ್‌ಗಳನ್ನು ಗುರುತಿಸಲಾಗಿದೆ. ಸದರಿ ನಿಗದಿತ ಸ್ಥಳಗಳಲ್ಲಿಯೇ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ-ವಹಿವಾಟು ನಡೆಸಬೇಕು ಎಂದು ತಿಳಿಸಿದರು.

ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ವಲಯ ಕಚೇರಿ-೧ರ ವಲಯ ಆಯುಕ್ತರಾದ ಸುನೀಲ ಪಾಟೀಲ ಸೇರಿದಂತೆ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.