ಸಾರಾಂಶ
ಇಂಧನ ಉಳಿತಾಯದ ಬಗ್ಗೆ ಜಾಗೃತಿ ಜಾಥಾ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಚಾಲನೆ ನೀಡಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕಾರಂಜಿ ಇಕೋ ಕ್ಲಬ್ ಮತ್ತು ಸಿಇಇಸಿಒ ಸಂಸ್ಥೆ ಸಹಯೋಗದಲ್ಲಿ ಇಂಧನ ಉಳಿತಾಯದ ಬಗ್ಗೆ ಜಾಗೃತಿ ಜಾಥಾ ನಡೆಯಿತು.ಜಾಥಾಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಚಾಲನೆ ನೀಡಿದರು. ನಂತರ ಮಾತನಾಡಿ, ಇಂಧನ ಮುಗಿದು ಹೋಗುವ ಖನಿಜವಾಗಿದ್ದು, ಅದನ್ನು ಸುರಕ್ಷಿತವಾಗಿ ಬಳಸಿದಲ್ಲಿ ಮಾತ್ರ ನಮ್ಮ ಮುಂದಿನ ತಲೆಮಾರಿಗೂ ಉಳಿಸಬಹುದು. ಪರಿಸರಕ್ಕೆ ಪೂರಕವಾದ ಇಂಧನಗಳನ್ನು ಬಳಸಿದಲ್ಲಿ ಹವಾಮಾನಕ್ಕೆ ಹೆಚ್ಚಿನ ಅನುಕೂಲವಾಗುವುದು. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು ವಿದ್ಯಾರ್ಥಿಗಳಿಂದ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಶಾಲಾ ಆವರಣದಿಂದ ಹೊರಟ ಜಾಥಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಈ ಸಂದರ್ಭ ಬಿಆರ್‌ಸಿ ಮಂಜೇಶ್, ಪ್ರೌಢಶಾಲಾ ಉಪ ಪ್ರಾಂಶುಪಾಲರಾದ ಹೇಮಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಶೋಧ, ಸಿಇಇಸಿಒ ಸಂಸ್ಥೆಯ ಹರೀಶ್, ಪ್ರೌಢಶಾಲಾ ಶಿಕ್ಷಕರಾದ ಬಿ. ವಿಜಯಕುಮಾರ್, ಶಶಿಧರ್, ಧನ್ಯ, ರಾಜರತ್ನ, ಬಸವರಾಜು, ವೆಂಕಟೇಶ್ ಹಾಗೂ ಆರಕ್ಷಕ ಸಿಬ್ಬಂದಿ ಇದ್ದರು.