ಕಠಿಣ ಕಾನೂನುಗಳ ಜಾರಿಗೆ ಹಕ್ಕೊತ್ತಾಯ

| Published : Sep 19 2024, 01:51 AM IST

ಸಾರಾಂಶ

ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಹೆಣ್ಣು ಮಕ್ಕಳ ರಕ್ಷಣಾ ಕಾನೂನುಗಳ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ, ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಹೆಣ್ಣು ಮಕ್ಕಳ ರಕ್ಷಣಾ ಕಾನೂನುಗಳ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ, ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಎರಡೂ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣವಾದ ಕಾನೂನುಗಳನ್ನು ಅನುಷ್ಠಾನಗೊಳಿಸಬೇಕು. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಿ, ಶಿಕ್ಷೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ.ನಾಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಕರ್, ತಾಲೂಕು ಅಧ್ಯಕ್ಷ ಶಶಿಧರ್ ಸಿ, ಉಪಾಧ್ಯಕ್ಷರಾದ ಗಿರೀಶ್, ಹೇಮಂತ್ ಕುಮಾರ್, ಯುವ ಘಟಕದ ತಾಲೂಕು ಅಧ್ಯಕ್ಷ ಅಜಿತ್ ಕುಮಾರ್, ತರುಣ್ ಸರ್ಜಾ, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್ ಕೆಆರ್, ಗೌರವಾಧ್ಯಕ್ಷ ಶಿವಲಿಂಗಯ್ಯ, ಜಿಲ್ಲಾ ಮುಖಂಡ ಅಗ್ನಿ ವೆಂಕಟೇಶ್, ತಾಲೂಕು ಸಂಚಾಲಕರಾದ ಮಹದೇವ್, ವಿಶ್ವನಾಥ್, ರವಿಕುಮಾರ್, ಧನಂಜಯ, ಸಂಘಟನೆ ಕಾರ್ಯದರ್ಶಿ ಸಂಘಟನಾ ಕಾರ್ಯದರ್ಶಿಗಳಾದ, ಮುನಿ ಆಂಜನಪ್ಪ, ಜಗದೀಶ್, ಕಾನೂನು ಸಲಹೆಗಾರರಾದ ಶ್ರೀನಿವಾಸ್, ಕಿರಣ್ ಕುಮಾರ್, ಸದಸ್ಯರಾದ ವಿನಯ್ ಕುಮಾರ್, ಶಿವಕುಮಾರ್, ವಾಸು, ವೆಂಕಟೇಶ್, ಶಂಕರ್, ಲಿಂಗೇಶ್‌ ಮತ್ತಿತರರು ಭಾಗವಹಿಸಿದ್ದರು.

ಫೋಟೋ-

18ಕೆಡಿಬಿಪಿ2- ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಹೆಣ್ಣು ಮಕ್ಕಳ ರಕ್ಷಣಾ ಕಾನೂನುಗಳ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ, ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯತು.