ಸಾರಾಂಶ
ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನ್ಯಾಯ ಮಾಡುತ್ತಿದೆ. ಈ ಬಾರಿ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಯೋಜನೆ ಜಾರಿ ಮರೆತು, ಕಡೆಗಣಿಸಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಗೌರವಾಧ್ಯಕ್ಷೆ ಸುಶೀಲಬಾಯಿ ಭದ್ರಾವತಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ, ಭದ್ರಾವತಿ
ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನ್ಯಾಯ ಮಾಡುತ್ತಿದೆ. ಈ ಬಾರಿ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಯೋಜನೆ ಜಾರಿ ಮರೆತು, ಕಡೆಗಣಿಸಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಗೌರವಾಧ್ಯಕ್ಷೆ ಸುಶೀಲಬಾಯಿ ಅಸಮಾಧಾನ ವ್ಯಕ್ತಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಈ ಹಿಂದೆ ಘೋಷಿಸಿರುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಸಹಾಯಕಿಯರಿಗೆ ₹10 ಸಾವಿರ ಮಾಸಿಕ ಗೌರವಧನ ಮತ್ತು ನಿವೃತ್ತರಿಗೆ ₹3 ಲಕ್ಷ ಇಡುಗಂಟು ನೀಡುವ ಭರವಸೆ ನೀಡಿದ್ದರು. ಆದರೆ, ಇದೀಗ ಈ ಭರವಸೆ ಮರೆತಿದ್ದಾರೆ. ಕೂಡಲೇ ಸರ್ಕಾರ ಅಂಗನವಾಡಿಗಳಲ್ಲಿ ದುಡಿಯುತ್ತಿರುವ ಮಹಿಳಾ ಸಮುದಾಯಕ್ಕೆ ಗೌರವಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿದರು.
ಸರ್ಕಾರ ವಿವಿಧ ಯೋಜನೆಗಳನ್ನು ಮನೆಮನೆಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ. ಆದರೂ, ಸರ್ಕಾರಕ್ಕೆ ಸಿಬ್ಬಂದಿ ಬಗ್ಗೆ ಗೌರವ, ಕಾಳಜಿ ಇಲ್ಲ. ಇದೀಗ ನೀಡುತ್ತಿರುವ ಕಡಿಮೆ ಗೌರವಧನದಲ್ಲಿ ಕುಟುಂಬ ನಿರ್ವಹಣೆಯೇ ಅಸಾಧ್ಯ ಎಂದು ಅಳಲು ವ್ಯಕ್ತಪಡಿಸಿದ ಅವರು, ತಕ್ಷಣ ಗೌರವಧನ ಹೆಚ್ಚಿಸಬೇಕು. ಮೊಬೈಲ್ ಬದಲು ಟ್ಯಾಬ್‌ಗಳನ್ನು ನೀಡಬೇಕೆಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷೆ ಆರ್.ವೇದಾವತಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವಿಶಾಲ, ಕಾರ್ಯಕಾರಿ ಸಮಿತಿ ಸದಸ್ಯೆ ಹೇಮಾವತಿ, ಪದಾಧಿಕಾರಿಗಳಾದ ರೇಖಾ, ಪ್ರಮೀಳಾ ಇದ್ದರು.
- - --ಡಿ20-ಬಿಡಿವಿಟಿ2:
ಭದ್ರಾವತಿ ಪತ್ರಿಕಾ ಭವನದಲ್ಲಿ ಅಂಗನವಾಡಿ ಫೆಡರೇಷನ್ ತಾಲೂಕು ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಒತ್ತಾಯಿಸಿದರು.