ಸಾರಾಂಶ
ಕನ್ನಡಪ್ರಭ ವಾರ್ತೆ ಸವದತ್ತಿ
ಸರ್ಕಾರಿ ಸೇವೆಯಲ್ಲಿರುವವರಿಗೆ ನಿವೃತ್ತಿ ಎಂಬುವುದು ಖಚಿತವಾಗಿದ್ದು, ನಿವೃತ್ತಿಯ ನಂತರ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಲ್ಲಿ ಸುವ್ಯವಸ್ಥಿತಿ ಸಮಾಜ ನಿರ್ಮಾಣಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಅಶ್ವತ ವೈದ್ಯ ಹೇಳಿದರು.ಪಟ್ಟಣದ ಗುರುಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸವದತ್ತಿ ತಾಲೂಕು ಘಟಕದ ೨೦೨೪ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ೭೫ ವಸಂತಗಳನ್ನು ಪೂರೈಸಿದ ಸಂಘದ ಸದಸ್ಯರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರದ ಬದುಕು ವಿಶ್ರಾಂತಿ ಜೀವನಕ್ಕೆ ಮೀಸಲಾದರೂ ಸಹಿತ ಸಮಾಜ ಸೇವೆಗೆ ಅವರ ಕೊಡುಗೆ ಅಗತ್ಯವಾಗಿದೆ ಎಂದರು.ನಿವೃತ್ತ ಪ್ರಾಚಾರ್ಯ ಡಾ.ವೈ.ಎಂ.ಯಾಕೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.೭೫ ವಸಂತಗಳನ್ನು ಪೂರೈಸಿದ ನಿವೃತ್ತ ನೌಕರರಿಗೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ಅಧ್ಯಕ್ಷರಿಗೆ ಮುಖ್ಯ ಅತಿಥಿಗಳಿಗೆ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಜಿ.ಸಿದ್ನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ದಂಡಿನ, ಸಂಘದ ಗೌರವಾಧ್ಯಕ್ಷ ಟಿ.ಎಲ್.ಬಿಜತ್ಕರ, ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಅಶೋಕ ಮುರಗೋಡ, ಎಂ.ಎಸ್.ಮುದುಕವಿ, ಸಂಘದ ಅಧ್ಯಕ್ಷ ಬಿ.ವಿ.ವಾಂಗಿ, ಉಪಾಧ್ಯಕ್ಷರಾದ ಎನ್.ವಿ.ಚೊಂಚೋಳ್ಳಿ, ಎಸ್.ಬಿ.ಜಗಾಪುರ,ಎ ಎ.ಕೆ.ಸರ್ಕಾಜಿ, ಸಿ.ಆರ್.ತಾರಿಹಾಳ, ಎನ್.ಸಿ.ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕ ಘಟಕದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.ಎಂ.ಎಂ.ಸಂಗಮ, ಆರ್.ಬಿ.ಬಿದರಿ ಶಿಕ್ಷಕಿಯರು ಪ್ರಾರ್ಥಿಸಿದರು. ಎನ್.ವಿ.ಚೂಂಚೋಳ್ಳಿ ಸ್ವಾಗತಿಸಿದರು. ಎಸ್.ಬಿ.ಜಗಾಪುರ ಹಾಗೂ ಎ.ಕೆ.ಸರಕಾಜಿ ನಿರೂಪಿಸಿದರು. ಜೆಬಿ ಕಾರ್ಲಕಟ್ಟಿ ವಂದಿಸಿದರು.