ಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಿ

| Published : Jan 26 2025, 01:32 AM IST

ಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಕೊಂಡಾಗ ಮಾತ್ರ ಮಕ್ಕಳ ಕಲಿಕೆಯನ್ನು ಯಶಸ್ವಿಗೊಳಿಸಬಹುದು ಎಂದು ಶಿರಾ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಡಾ.ಚಂದ್ರಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಕೊಂಡಾಗ ಮಾತ್ರ ಮಕ್ಕಳ ಕಲಿಕೆಯನ್ನು ಯಶಸ್ವಿಗೊಳಿಸಬಹುದು ಎಂದು ಶಿರಾ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಡಾ.ಚಂದ್ರಯ್ಯ ತಿಳಿಸಿದರು. ಶುಕ್ರವಾರ ಬಾಪೂಜಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕನ್ನಡ ಉಪನ್ಯಾಸಕರ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ಉಪನ್ಯಾಸಕರಿಗೆ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರತಿಯೊಂದು ಶಾಲೆಯ ಕೋಣೆಗಳಲ್ಲಿ ದೇಶದ ಭವಿಷ್ಯ ಅಡಗಿದ್ದು, ಆ ಭವಿಷ್ಯ ಉಜ್ವಲವಾಗಬೇಕಾದರೆ ಮೊದಲು ಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಾಗಾರದ ಸಂಚಾಲಕ ನೇರಂ ನಾಗರಾಜು ಮಾತನಾಡಿ, ನಮ್ಮ ಜಿಲ್ಲೆಯ ಉಪನಿರ್ದೇಶಕ ಡಾ.ಬಾಲ ಗುರುಮೂರ್ತಿ ಆಶಯದಂತೆ ಈಗಾಗಲೇ ಎಲ್ಲಾ ವಿಷಯಗಳ ಕಾರ್ಯಾಗಾರ ನಡೆದಿದ್ದು, ಇಲಾಖೆಯ ನಿಯಮದಂತೆ ಮತ್ತೊಮ್ಮೆ ಪುನಶ್ಚೇತನ ಕಾರ್ಯಾಗಾರ ನಡೆಯುತ್ತಿರುವುದು ಉಪನ್ಯಾಸಕರ ಕಲಿಕೆಯ ಪುನಶ್ಚೇತನಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಶಿಕ್ಷಕರು ಹರಿಯುತ್ತಿರುವ ನೀರಿನಂತೆ ಇರಬೇಕೇ ಹೊರತು ನಿಂತ ನೀರಾಗಬಾರದು. ನಮ್ಮ ತರಗತಿಯ ಸಮಯದಲ್ಲಿ ಪಠ್ಯ ವಿಷಯಗಳ ಬಗ್ಗೆ ಇನ್ನಷ್ಟು ಹೆಚ್ಚಿನ ಅಂಶ ತಿಳಿದುಕೊಂಡು ಮಕ್ಕಳ ಮನಸ್ಸಿಗೆ ನಾಟುವಂತೆ ಪಾಠ ಮಾಡಲು ಇಂತಹ ಕಾರ್ಯಾಗಾರಗಳು ಪ್ರಮುಖ ಪಾತ್ರ ಕಟ್ಟಿಕೊಡುತ್ತವೆ ಎಂದು ತಿಳಿಸಿದರು. ಬಾಪೂಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸುಮಂಗಲ ಜೇಮ್ಸ್, ವಿಷಯ ತಜ್ಞರಾದ ಡಾ.ದೇವರಾಜು, ಜಕ್ಕೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಚಂದ್ರಪ್ಪ, ಶಶಿಭೂಷಣ್, ಜನಪತಿ ರಾಮಕೃಷ್ಣ, ಡಾ.ಡಿ. ಎಚ್ ಮಂಜುನಾಥ್, ಡಾ.ನರಸಿಂಹ ಮೂರ್ತಿ, ಜಿಲ್ಲಾ ಕನ್ನಡ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಗೋವಿಂದಪ್ಪ, ಸತೀಶ್.ಸಿ.ಜಿ, ಉಪನ್ಯಾಸಕರಾದ ಯತೀಶ್, ಪ್ರಾಂಶುಪಾಲರಾದ ನಟೇಶ್, ವೆಂಕಟಾಚಲ, ಶೈಲಜಾ ಇತರರಿದ್ದರು.