ವಿದ್ಯಾರ್ಥಿಗಳೇ ಸಂಶೋಧನೆ, ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಿ: ಪ್ರದೀಪ್‌

| Published : Mar 01 2024, 02:17 AM IST

ವಿದ್ಯಾರ್ಥಿಗಳೇ ಸಂಶೋಧನೆ, ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಿ: ಪ್ರದೀಪ್‌
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿಯೇ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಟೈಮ್ಸ್ ಬಿ. ಪ್ರದೀಪ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಇದು ತಾಂತ್ರಿಕ ಮತ್ತು ವೈಜ್ಞಾನಿಕ ಜಗತ್ತಾಗಿದ್ದು ವಿಜ್ಞಾನ ಕ್ಷೇತ್ರ ಅಭಿವೃದ್ಧಿಯಾದಂತೆ ದೇಶದ ಅಭಿವೃದ್ಧಿಯಾಗಲಿದ್ದು ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿಯೇ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಟೈಮ್ಸ್ ಬಿ. ಪ್ರದೀಪ್ ತಿಳಿಸಿದರು.

ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಜಕ್ಕನಹಳ್ಳಿ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ವಿಜ್ಞಾನ ಮಾದರಿಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನಕ್ಕೆ ಹೆಚ್ಚು ಮಹತ್ವ ಕೊಡಬೇಕೆಂಬ ದೃಷ್ಟಿಯಿಂದ ಡಾ. ಸಿ.ವಿ.ರಾಮನ್ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿದ್ದೇವೆ. ವಿಜ್ಞಾನದ ಪ್ರಯೋಗಗಳು ಜನಸಾಮಾನ್ಯರಿಗೆ ಸಿಗಬೇಕು. ವಿಜ್ಞಾನದಿಂದ ಜನರಿಗೆ ಉಪಯೋಗಗಳಾಗಬೇಕು. ಅಪರಿಮಿತ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯವಾಗಿದ್ದು, ಸಾಧನೆ ಮಾಡಲು ಛಲ ಮತ್ತು ಮನಸ್ಸು ನಿಮ್ಮಲ್ಲಿರಬೇಕು ಎಂದರು.

ವಿದ್ಯಾರ್ಥಿಗಳು ಕೇವಲ ರ‍್ಯಾಂಕ್ ಬಂದರೆ ಸಾಲದು, ಕೌಶಲ್ಯ ಹಾಗೂ ವ್ಯವಹಾರದ ಜ್ಞಾನ, ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡರೆ ಭವಿಷ್ಯದ ಜೀವನ ಉತ್ತಮವಾಗಲಿದ್ದು ವಿಜ್ಞಾನಿಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವ ಜತೆಗೆ ತಾಂತ್ರಿಕತೆಯ ಜ್ಞಾನವನ್ನು ಪಡೆದುಕೊಂಡು ಹೊಸ ಹೊಸ ಸಂಶೋಧನೆಗಳಲ್ಲಿ ತೊಡಗಿಸಿಕೊಂಡು ದೇಶಕ್ಕೆ ತಮ್ಮದೇ ಕೊಡುಗೆ ನೀಡಬೇಕೆಂದರು.

ಮುಖ್ಯ ಶಿಕ್ಷಕಿ ಪುಷ್ಟಾವತಿ ಮಾತನಾಡಿ, ವಿಜ್ಞಾನವೆಂಬುದು ನಿಂತ ನೀರಾಗದೆ ಸದಾ ಹರಿಯುತ್ತಿರಬೇಕಾದರೆ ವಿದ್ಯಾರ್ಥಿಗಳು ಹೆಚ್ಚೆಚ್ಚು ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಅಧ್ಯಯನಲ್ಲಿ ತೊಡಗಬೇಕು. ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಟೈಮ್ಸ್ ಸಂಸ್ಥೆಯು ನಗರ ಹಾಗೂ ಗ್ರಾಮೀಣ ಪ್ರದೇಶದ ಪ್ರೌಢಶಾಲೆಗಳಲ್ಲಿ ಸೈನ್ಸ್ ಎಕ್ಸ್‌ಪೋ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದ್ದು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಸಿಆರ್‌ಪಿ ಸರಸ್ವತಿ, ಶಿಕ್ಷಕರಾದ ಶಿವಕುಮಾರ್‌, ರಾಜಶ್ರೀ, ಸುಧಾ, ಟೈಮ್ಸ್ ಕಾಲೇಜಿನ ಉಪನ್ಯಾಸಕ ಯೋಗೀಶ್ ಮತ್ತಿತರರಿದ್ದರು.