ಎಸ್.ಕುಮಾರ ಸಂಸ್ಥೆಯಲ್ಲಿ ಎಂಜಿನಿಯರ್ ಡೇ ಆಚರಣೆ

| Published : Sep 17 2024, 12:55 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಎಸ್.ಕುಮಾರ ಪಿಯು ಸೈನ್ಸ್ ಕಾಲೇಜಿನಲ್ಲಿ ಸಂಸ್ಥಾಪಕ ಎಸ್.ಕುಮಾರ ಮತ್ತು ಅಧ್ಯಕ್ಷೆ ಡಾ.ಲತಾದೇವಿ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಎಂಜಿನಿಯರ್ ದಿನವನ್ನು ಆಚರಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಎಸ್.ಕುಮಾರ ಪಿಯು ಸೈನ್ಸ್ ಕಾಲೇಜಿನಲ್ಲಿ ಸಂಸ್ಥಾಪಕ ಎಸ್.ಕುಮಾರ ಮತ್ತು ಅಧ್ಯಕ್ಷೆ ಡಾ.ಲತಾದೇವಿ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಎಂಜಿನಿಯರ್ ದಿನವನ್ನು ಆಚರಿಸಿದರು.

ಸಂಸ್ಥೆಯ ಸಂಸ್ಥಾಪಕ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ನಿವೃತ್ತ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಎಸ್.ಕುಮಾರ ಅವರು ಮಾತನಾಡಿ, ಎಂಜನಿಯರಿಂಗ್ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯನವರು ನೀಡಿದ ಕೊಡುಗೆ ಅಪಾರವಾಗಿದೆ. ಆಧುನಿಕ ಭಾರತದ ಅಭಿವೃದ್ಧಿಯಲ್ಲಿ ಅವರ ಮಹತ್ವದ ಪಾತ್ರವನ್ನು ಗೌರವಿಸಲು ಸೆ.15ರಂದು ಎಂಜನಿಯರ್ ದಿನವನ್ನು ಆಚರಣೆ ಮಾಡಲಾಗುತ್ತದೆ. ಜೀವನವನ್ನು ಸುಧಾರಿಸುವ ಹೊಸ ಹೊಸ ಆವಿಷ್ಕಾರ, ತಂತ್ರಜ್ಞಾನ ವೈದ್ಯಕೀಯ ಸಾಧನಗಳು, ಉಪಕರಣಗಳನ್ನು ಎಂಜಿನಿಯರ್‌ಗಳು ಅಭಿವೃದ್ಧಿಪಡಿಸುತ್ತಾರೆ. ಆದ್ದರಿಂದ ಆವಿಷ್ಕಾರವನ್ನು ಸ್ಮರಿಸುವ ದಿನವಾಗಿದೆ ಎಂದರು.

ವಿದ್ಯಾರ್ಥಿಗಳು ಮೆಕಾನಿಕಲ್, ಸಿವಿಲ್ ಎಲೆಕ್ಟ್ರಾನಿಕ್ ಎಂಜಿನಿಯರ್‌ಗಳಂತಹ ಹಲವು ರೀತಿಯ ಇಂಜಿನಿಯರಿಂಗ್ ವಿಭಾಗಗಳಿವೆ. ಇವುಗಳಲ್ಲಿ ನಿಮಗೆ ಆಸಕ್ತಿದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿ ರಾಷ್ಟ್ರವನ್ನು ಅಭಿವೃದ್ಧಿ ಪಡಿಸಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಸಂಸ್ಥೆಯ ಅಧ್ಯಕ್ಷೆ ಡಾ.ಎಚ್.ಟಿ.ಲತಾದೇವಿ ಮಾತನಾಡಿ, ರಾಷ್ಟ್ರೀಯ ಎಂಜಿನಿಯರ್ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳನ್ನು ಪ್ರಶಂಶಿಸಲು ಮತ್ತು ಗುರುತಿಸುವ ದಿನವಾಗಿದೆ. ಸಿವಿಲ್, ಮೆಕ್ಯಾನಿಕಲ್, ಸಾಫ್ಟವೇರ್, ಪರಿಸರ ಎಂಜಿನಿಯರ್ ನಂತರ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ರಾಷ್ಟ್ರದ ಪ್ರಗತಿಗೆ ಅತ್ಯಗತ್ಯ. ಅವರ ಆಲೋಚನೆಗಳು, ಪರಿಹಾರಗಳು, ಜೀವನ, ಕೈಗಾರಿಕೆಗಳು, ಆರ್ಥಿಕತೆಯನ್ನು ಬದಲಾಯಿಸಿವೆ. ಅವರ ತಾಂತ್ರಿಕ ಕೌಶಲಕ್ಕಾಗಿ ಮಾತ್ರವಲ್ಲದೆ ಸಮಾಜವನ್ನು ಸುಧಾರಿಸುವ ದೃಷ್ಟಿಯಾಗಿರುತ್ತದೆ ಎಂದು ಹೇಳಿದರು. ಈ ವೇಳೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹಲವು ಪಾಲಕರು ಉಪಸ್ಥಿತರಿದ್ದರು.