ಕನ್ನಡಪ್ರಭ ವಾರ್ತೆ ಗುರುಮಟಕಲ್
ಪಟ್ಟಣದ ಸೆಂಟ್ರಲ್ ಬೋರ್ಡ್ ಕಂಪ್ಯೂಟರ್ ಶಿಕ್ಷಣ ಕೌಶಲ್ಯ ಭಾರತ ಹಾಗೂ ಸ್ಪೀಕ್ ನೌ ತರಬೇತಿ ಕೇಂದ್ರದ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಯಿತು.ಈ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ನಾರಾಯಣರೆಡ್ಡಿ ಪೊಲೀಸ್ ಪಾಟೀಲ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಮತ್ತು ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯವಾಗಿದೆ. ಈ ಕೌಶಲ್ಯಗಳನ್ನು ಪಡೆದರೆ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಉತ್ತಮ ಉದ್ಯೋಗಾವಕಾಶಗಳಿವೆ ಎಂದು ಹೇಳಿದರು.
ಶಿಕ್ಷಕರಾದ ಹುಸೇನಪ್ಪ ಸಕ್ರಿ ಮಾತನಾಡಿ, ಭಾರತವು ವಿಶ್ವದಲ್ಲೇ ಅತಿಹೆಚ್ಚು ಯುವಜನಸಂಖ್ಯೆ ಹೊಂದಿರುವ ದೇಶವಾಗಿದ್ದು, ದೇಶದ ಅಭಿವೃದ್ಧಿಗೆ ನುರಿತ ಯುವಶಕ್ತಿ ಅಗತ್ಯವಾಗಿದೆ. ಕೈಗಾರಿಕೆಗಳ ಯಶಸ್ಸಿಗೆ ಮೂಲಸೌಕರ್ಯದ ಜೊತೆಗೆ ಕೌಶಲ್ಯಯುತ ನುರಿತ ಕಾರ್ಮಿಕರು ಪ್ರಮುಖವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ವಿವಿಧ ಸಂಘ-ಸಂಸ್ಥೆಗಳು ಜಾರಿಗೊಳಿಸಿರುವ ಕೌಶಲ್ಯಾಭಿವೃದ್ಧಿ ಹಾಗೂ ಸ್ವಯಂ ಉದ್ಯೋಗ ಯೋಜನೆಗಳನ್ನು ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಪ್ರಜಾವಾಣಿ ಪತ್ರಿಕೆಯ ವರದಿಗಾರ ಮಲ್ಲಿಕಾರ್ಜುನ ಪಾಟೀಲ ಹಾಗೂ ಕನ್ನಡಪ್ರಭ ಪತ್ರಿಕೆಯ ವರದಿಗಾರ ವೆಂಕಟೇಶ ನಿಂಗವೋಳ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ರವರು ಯುವಕರ ಕೌಶಲ್ಯಾಭಿವೃದ್ಧಿಗೆ ಇಂತಹ ತರಬೇತಿ ಕೇಂದ್ರಗಳು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು.
ವೇದಿಕೆಯ ಮೇಲಿನ ಗಣ್ಯರು ಸಂಸ್ಥೆಯ ಯುವಕ-ಯುವತಿಯರಿಗೆ ಪುಸ್ತಕ ಕೈಪಿಡಿ ಹಾಗೂ ಸಮವಸ್ತ್ರಗಳನ್ನು ವಿತರಿಸಿದರು. ಕಾರ್ಯಕ್ರಮವನ್ನು ಕುಮಾರಿ ನಾಗರತ್ನ ನಿರೂಪಿಸಿದರು. ಅರ್ಚನಾ ಸ್ವಾಗತಿಸಿದರು. ಅಕ್ಷತಾ ರೆಡ್ಡಿ ವಂದನಾರ್ಪಣೆ ಸಲ್ಲಿಸಿದರು. ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು---ನಿರುದ್ಯೋಗಿ ಯುವಕ-ಯುವತಿಯರಿಗೆ ಗುಣಮಟ್ಟದ ತರಬೇತಿ ನೀಡುವ ಮೂಲಕ ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 150ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ತರಬೇತಿ ಪಡೆದು, ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಸಂಪಾದಿಸಿದ್ದು, ಆ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸಂಸ್ಥೆಗೆ ಇದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
- ನಾಗೇಶ ನಜಾರಪೂರ, ನಿರ್ದೇಶಕರು ಸ್ವೀಕ್ ನೌ ತರಬೇತಿ ಕೇಂದ್ರ