ಸಾರಾಂಶ
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಪುಟಾಣಿ ಮಕ್ಕಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಕ್ರಮದ ಅಂಗವಾಗಿ ಪೊನ್ನಂಪೇಟೆಯ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಇಂದಿನ ಆಧುನಿಕ ಯುಗದಲ್ಲಿ ಸಾಧನೆ ಮಾಡಲು ಇಂಗ್ಲಿಷ್ ಭಾಷೆಯ ತಿಳುವಳಿಕೆ ಅತಿ ಅವಶ್ಯಕ ಆಗಿದೆ. ಈ ನಿಟ್ಟಿನಲ್ಲಿ ಚಿಂತಿಸಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಕನ್ನಡದೊಂದಿಗೆ ಆಂಗ್ಲ ಭಾಷೆಯನ್ನು ಮಕ್ಕಳಿಗೆ ಹೇಳಿಕೊಡುವ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಅಂಗನವಾಡಿಯಲ್ಲಿ ಇರುವ ಶಿಕ್ಷಕಿಯರು ಹಾಗೂ ಸಹಾಯಕಿಯರು ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಆಸಕ್ತಿಯನ್ನು ಮೂಡುವಂತೆ ಮಾಡಬೇಕೆಂದು ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಪುಟಾಣಿ ಮಕ್ಕಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಕ್ರಮದ ಅಂಗವಾಗಿ ಗುರುವಾರ ಪೊನ್ನಂಪೇಟೆಯ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಿ ಅವರು ಮಾಡಿದರು.
ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲೀರ ರಶೀದ್, ಪಂಚಾಯಿತಿ ಮುಖ್ಯ ಅಧಿಕಾರಿ ಗೋಪಿ, ಸದಸ್ಯರಾದ ಕೋಳೆರ ಭಾರತಿ, ಸುನಿತಾ, ರಫೀಕ್, ಜುನೈದ್, ರಾಮಕೃಷ್ಣ, ಹಿರಿಯರಾದ ಮೂಕಲೆರ ಕುಶಾಲಪ್ಪ, ಪಕ್ಷದ ಪ್ರಮುಖರಾದ ಬಾಬು, ಅಪ್ಪಚ್ಚಂಗಡ ಮೋಟಯ್ಯ, ಕಡೆಮಾಡ ಕುಸುಮ, ಧನ್ಯ, ಪಲ್ವಿನ್ ಪೂಣಚ್ಚ, ಉದಯ್, ಹರೀಶ್, ಪ್ರೀತಂ, ಮಂಜು ದೇವಯ್ಯ, ತಾಲೂಕು ತಹಸೀಲ್ದಾರ್ ಮೋಹನ್ ಕುಮಾರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ, ಅಂಗನವಾಡಿ ಶಿಕ್ಷಕಿಯರು, ಸಹಾಯಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.