ಸಾರಾಂಶ
, ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ.
ಕನ್ನಡಪ್ರಭ ವಾರ್ತೆ ಹನೂರು
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಮುಖವಾಗಿ ಬೇಕಾಗಿರುವುದರಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಯನ್ನು ಆರಂಭಿಸಿರುವುದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನುಕೂಲದಾಯಕವಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.ಹನೂರು ತಾಲೂಕಿನ ಕಣ್ಣೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿ ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಕ್ಷರ ಅಭ್ಯಾಸ ಮಾಡಿಸಿದರು.
ನಂತರ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆದು ಉತ್ತಮ ಫಲಿತಾಂಶ ನೀಡುವುದರ ಮೂಲಕ ಹೆಸರು ತರಬೇಕು. ಶೈಕ್ಷಣಿಕ ವಲಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಸಹ ಶ್ರಮಿಸಬೇಕು ಎಂದರು.ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಬಿ.ಆರ್ .ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಚಿನ್ನಪ್ಪಯ್ಯ, ಮಹೇಶ್, ದೈಹಿಕ ಶಿಕ್ಷಕ ಪರಿವೀಕ್ಷಕ ಕ್ಯಾಂಪರಾಜ್, ಸಿಆರ್ ಪಿ ಅನ್ವರ್ ಖಾನ್, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶ್, ಮುಖ್ಯ ಶಿಕ್ಷಕಿ ಶಿವಮ್ಮ, ಪಿಡಿಒ ಸಿದ್ದರಾಜು, ಸಹಶಿಕ್ಷಕರಾದ ಸಾವುಕರಾಜ್, ಶಿವಕುಮಾರ್, ಸುರೇಶ್ ಕುಮಾರ್, ಶೃತಿ, ಲತಾ, ಇನ್ನಿತರ ಶಿಕ್ಷಕರು ಹಾಗೂ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.