ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು, ತೆರವು: ಶಿವಾನಂದ

| Published : Dec 19 2023, 01:45 AM IST

ಸಾರಾಂಶ

ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಪಟ್ಟಣದಲ್ಲಿ ಡಿ.19 ರಂದು ಕನ್ನಡ ನಾಮಫಲಕ ಇಲ್ಲದ ಎಲ್ಲ ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು, ತೆರವುಗೊಳಿಸಲಾಗುವುದು ಎಂದು ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಪಟ್ಟಣದಲ್ಲಿ ಡಿ.19 ರಂದು ಕನ್ನಡ ನಾಮಫಲಕ ಇಲ್ಲದ ಎಲ್ಲ ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು, ತೆರವುಗೊಳಿಸಲಾಗುವುದು ಎಂದು ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆ ವ್ಯಾಪ್ತಿಗೆ ಬರುವಂತಹ ಎಲ್ಲ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಸರ್ಕಾರದ ಆದೇಶದನ್ವಯ ಶೇ.60 ರಷ್ಟು ಕನ್ನಡ ಭಾಷೆಯನ್ನು ಬಳಸಲು ಕಡ್ಡಾಯಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪದಾಧಿಕಾರಿಗಳು ಅಂಗಡಿ ಮಾಲೀಕರಲ್ಲಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಸಾಕಷ್ಟು ಬಾರಿ ಮನವಿ ಮಾಡಿಕೊಳ್ಳಲಾಗಿತ್ತು. ತಾಲೂಕಿನಾದ್ಯಂತ ಹಾಗೂ ನಗರದ ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೆ ಆಂಗ್ಲ್‌ ಭಾಷೆ ರಾರಾಜಿಸುತ್ತಿವೆ. ಆಂಗ್ಲ್‌ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒಂದು ವಾರಗಳ ಕಾಲ ಗಡುವು ನೀಡಲಾಗಿತ್ತು. ಕೆಲ ಅಂಗಡಿಕಾರರು ಸಂಬಂಧವಿಲ್ಲದಂತೆ ವರ್ತಿಸುತ್ತಿರುವ ಕಾರಣ ಕರವೇಯಿಂದ ಆಂಗ್ಲ್‌ ಭಾಷೆ ನಾಮಫಲಕಗಳಿಗೆ ಮಸಿ ಬಳೆದು ತೆರವುಗೊಳಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

ತಾಲೂಕು ಘಟಕ ಅಧ್ಯಕ್ಷ ರಾಜು ಬೋಳನ್ನವರ, ನಗರ ಘಟಕ ಅಧ್ಯಕ್ಷ ಶಿವಾನಂದ ಕುರಬೇಟ್ ಹಾಗೂ ಕರವೇ ಕಾರ್ಯಕರ್ತರು ಇದ್ದರು.