ಪಠ್ಯೇತರ ಚಟುವಟಿಕೆಯಿಂದ ವ್ಯಕ್ತಿತ್ವಕ್ಕೆ ಮೆರುಗು: ಡಾ. ಪೈ

| Published : Jun 28 2024, 12:54 AM IST

ಪಠ್ಯೇತರ ಚಟುವಟಿಕೆಯಿಂದ ವ್ಯಕ್ತಿತ್ವಕ್ಕೆ ಮೆರುಗು: ಡಾ. ಪೈ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ, ಎನ್‌ಸಿಸಿ, ಎನ್‌ಎಸ್‌ಎಸ್ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.

ಕುಮಟಾ: ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಪಠ್ಯ ಕಲಿಕೆಯಿಂದ ಉನ್ನತ ಸಾಧನೆ ಅಸಾಧ್ಯ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭೆಯನ್ನು ಒರೆಗೆ ಹಚ್ಚುವ ಮೂಲಕ ವ್ಯಕ್ತಿತ್ವವನ್ನು ಬೆಳಗಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಡಾ. ವಿ.ಎಂ. ಪೈ ತಿಳಿಸಿದರು.

ಇಲ್ಲಿನ ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಸ್ಪರ್ಧಾ ವಿಜೇತರ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ, ಎನ್‌ಸಿಸಿ, ಎನ್‌ಎಸ್‌ಎಸ್ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ಉತ್ತಮಗೊಳ್ಳುವ ಜತೆಗೆ ಸಮಾಜಕ್ಕೂ ಕೊಡುಗೆ ನೀಡಲು ಸಾಧ್ಯ. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ನೀಡುತ್ತದೆ. ಆತ್ಮವಿಶ್ವಾಸ, ಜೀವನೋತ್ಸಾಹ ಇಮ್ಮಡಿಯಾಗುತ್ತದೆ ಎಂದರು.

ಕೆನರಾ ಕಾಲೇಜು ಸೊಸೈಟಿ ಆಡಳಿತ ಸದಸ್ಯ ಸುರೇಶ ಭಟ್, ಮುರಳೀಧರ ಭಟ್, ಕಮಲಾ ಬಾಳಿಗಾ ಪ್ರಶಿಕ್ಷಣ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಜಿ.ಡಿ. ಭಟ್ ಭಾಗವಹಿಸಿದ್ದರು. ಪ್ರಾಚಾರ್ಯೆ ಡಾ. ರೇವತಿ ಆರ್. ನಾಯಕ ಅಧ್ಯಕ್ಷತೆ ವಹಿಸಿದ್ದರು. ಯುನಿಯನ್ ಕಾರ್ಯಾಧ್ಯಕ್ಷ ಡಾ. ಅರವಿಂದ ನಾಯಕ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಡಾ. ಶ್ರೀನಿವಾಸ ಹರಿಕಾಂತ, ವಿದ್ಯಾರ್ಥಿ ಯುನಿಯನ್ ಕಾರ್ಯದರ್ಶಿ ಅನಿರುದ್ಧ ಭಟ್ಟಕೆರೆ, ಶ್ರಾವ್ಯ ಗಾಂವ್ಕರ್ ವೇದಿಕೆಯಲ್ಲಿದ್ದರು. ಪವನ್ ನಾಯ್ಕ, ನೂರ್‌ಸಾಬ ನಿರೂಪಿಸಿದರು. ಕ್ರೀಡೆ, ಸಾಂಸ್ಕೃತಿಕ ಇನ್ನಿತರ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.