ಸಾರಾಂಶ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಕುರಿತು ಮಾತನಾಡಿದ ಬಿ.ಮುನೇಗೌಡ, ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ; ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತಾಗಿದೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದರು.ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ವಿಜಯ್ ಕುಮಾರ್, ಹುಸ್ಕೂರು ಆನಂದ್, ತಾಲೂಕು ಅಧ್ಯಕ್ಷರಾದ ಲಕ್ಷ್ಮೀಪತಯ್ಯ, ತಿಮ್ಮರಾಯಪ್ಪ, ಮುನೇಗೌಡ, ವಕ್ತಾರರಾದ ಕುಂಟನಹಳ್ಳಿ ಮಂಜುನಾಥ್, ಶಶಿಕಲಾ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ತಾಲೂಕು ಅಧ್ಯಕ್ಷೆ ಶಾಂತಮ್ಮ, ಮುಖಂಡರಾದ ಧರ್ಮೇಂದ್ರ, ಚನ್ನೇಗೌಡ, ಕೆಂಪೇಗೌಡ, ಸುರೇಶ್, ಅರುಣ್, ಮಹೇಶ್, ಮನು, ವಿಶ್ವನಾಥ್ ಮತ್ತಿತರರಿದ್ದರು.