ಉತ್ತಮ ಶಿಕ್ಷಣಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

| Published : May 29 2024, 12:50 AM IST / Updated: May 29 2024, 12:51 AM IST

ಉತ್ತಮ ಶಿಕ್ಷಣಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಅಳಿವಿನ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ನಾವೆಲ್ಲರೂ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮುಖ್ಯ ಶಿಕ್ಷಕ ಮಹೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಅಳಿವಿನ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ನಾವೆಲ್ಲರೂ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮುಖ್ಯ ಶಿಕ್ಷಕ ಮಹೇಶ್ ತಿಳಿಸಿದರು.

ತಾಲೂಕಿನ ಹಾಗಲವಾಡಿ ಹೋಬಳಿಯ ಅಳಿಲಘಟ್ಟ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಅಂದೋಲನ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಗುಣ ಮಟ್ಟದ ಶಿಕ್ಷಣದ ಜೂತೆ ಸಂಸ್ಕಾರವನ್ನು ಶಿಕ್ಷಕರು‌ ಮಕ್ಕಳಿಗೆ ನೀಡುವುದರ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಸಿಗಲಿದೆ. ನಾವೆಲ್ಲರೂ ಸಹ ಸರ್ಕಾರಿ‌‌ ಶಾಲೆಯಲ್ಲಿ ಓಧಿ ಶಿಕ್ಷಕರಾಗಿದೇವೆ. ಆದ್ದರಿಂದ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಶಾಲೆಗಳ ಉಳಿವಿಗೆ ನಾವೆಲ್ಲರೂ ಕೈಜೋಡಿಸಬೇಕು ಎಂದರು.

ಸರ್ಕಾರಿ ಶಾಲೆಯಲ್ಲಿ ಸರ್ಕಾರ ಹತ್ತಾರು ಯೋಜನೆಗಳನ್ನು ಮಾಡುವ ಮೂಲಕ ಎಲ್ಲ ರೀತಿಯ ಸೌಲಭ್ಯಗಳನ್ನು ದೊರೆಯಲಿದ್ದು, ಅದರ ಸದುಪಯೋಗ ಪಡೆದುಕೊಳಬೇಕು. ಶಾಲೆಗಳಲ್ಲಿ ವಿಶೇಷವಾಗಿ ಅಭಿಯಾನ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ದನೆಗೆ ಮುಂದಾಗಿದೇವೆ. ತಾಲೂಕಿನ ಅಳಿಲಘಟ್ಟ, ಸಾಗಸಂದ್ರ, ಅಪ್ಪಣನಹಳ್ಳಿ, ಹಾಗಲವಾಡಿ, ಮಂಚಲದೊರೆ, ಮಠ ಗಂಗಯ್ಯನಪಾಳ್ಯ ಗ್ರಾಮಗಳಲ್ಲಿ ವಿಶೇಷ ಆಂದೋಲನ ಜಾಥಾ ಮೂಲಕ ಅರಿವು ಮೂಡಿಸಲಾಯಿತು.

ತಾಲೂಕು ಸಂಯೋಜಕ ಅಧಿಕಾರಿ ದೇವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಣ ಎನ್. ಟಿ .ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕುಮಾರ್, ಜಿಲ್ಲಾ ಉಪಾಧ್ಯಕ್ಷೆ ಯಶೋಧಮ್ಮ, ಉಪಾಧ್ಯಯ ಸಹಕಾರ ಸಂಘಸ ಅಧ್ಯಕ್ಷ‌ ಕರಿಬಸವಯ್ಯ, ಮುಖ್ಯ ಶಿಕ್ಷಕ ರಂಗಸ್ವಾಮಿ, ಎಲ್ಲ ತಾಲೂಕಿನ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದರು.