ಮೂರು ವರ್ಷಕ್ಕೂ ಮೇಲ್ಪಟ್ಟು ಮಕ್ಕಳನ್ನು ಈಗಾಗಲೇ ತಾಲೂಕಿನಲ್ಲಿ ಸ್ಥಾಪಿಸಿರುವ ಮಕ್ಕಳ ಮನೆಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಉತ್ತಮವಾದ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಶಾಸಕ ಎ. ಮಂಜು ಸಲಹೆ ನೀಡಿದರು. ಮಕ್ಕಳ ಮನೆ ಶಾಲೆಯನ್ನು ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ಹಾಗೂ ಮಧ್ಯಮ ವರ್ಗದವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಯಾವುದೇ ಆಮಿಷಗಳಿಗೆ ಒಳಗಾಗದಂತೆ ಖುದ್ದಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡುವ ಮೂಲಕ ಶಿಕ್ಷಣವನ್ನು ಪಡೆದುಕೊಳ್ಳಲು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ ಮೂರು ವರ್ಷಕ್ಕೂ ಮೇಲ್ಪಟ್ಟು ಮಕ್ಕಳನ್ನು ಈಗಾಗಲೇ ತಾಲೂಕಿನಲ್ಲಿ ಸ್ಥಾಪಿಸಿರುವ ಮಕ್ಕಳ ಮನೆಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಉತ್ತಮವಾದ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಶಾಸಕ ಎ. ಮಂಜು ಸಲಹೆ ನೀಡಿದರು.ರಾಮನಾಥಪುರ ಹೋಬಳಿ ಕಾಳೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ಮಕ್ಕಳ ಮನೆ ಶಾಲೆಯನ್ನು ಈ ವರ್ಷದಿಂದ ಪ್ರಾರಂಭಿಸುತ್ತಿದ್ದು, ಮಕ್ಕಳ ಮನೆ ಶಾಲೆಯನ್ನು ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ಹಾಗೂ ಮಧ್ಯಮ ವರ್ಗದವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಯಾವುದೇ ಆಮಿಷಗಳಿಗೆ ಒಳಗಾಗದಂತೆ ಖುದ್ದಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡುವ ಮೂಲಕ ಶಿಕ್ಷಣವನ್ನು ಪಡೆದುಕೊಳ್ಳಲು ಸಲಹೆ ನೀಡಿದರು.ತಾಲೂಕಿನಲ್ಲಿ ಕಳೆದ ವರ್ಷ 13 ಮಕ್ಕಳ ಮನೆ ಪ್ರಾರಂಭ ಮಾಡಿದ್ದು, ಈ ವರ್ಷ ನಾಲ್ಕು ಹೆಚ್ಚುವರಿಯಾಗಿ ಮಕ್ಕಳ ಮನೆ ಪ್ರಾರಂಭಿಸುತ್ತಿದ್ದು, ಗ್ರಾಮೀಣ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮಕ್ಕಳ ಮನೆ ಪ್ರಾರಂಭ ಮಾಡಲಾಗಿದೆ. ಮಕ್ಕಳು ಪ್ರಾರಂಭದಿಂದಲೇ ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳುವಂತೆ ಶಾಸಕ ಎ. ಮಂಜು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.