ಸಾರಾಂಶ
ಹನೂರು ಪಟ್ಟಣದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಕ್ಷೇತ್ರ ಸಮನ್ವಯಧಿಕಾರಿ ವೆಂಕಟೇಶ್ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಹನೂರು
ಸರ್ಕಾರಿ ಶಾಲಾ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನೂ ಶಾಲೆಗೆ ದಾಖಲೆ ಮಾಡಲು ಮುಂದಾಗಬೇಕು ಎಂದು ಕ್ಷೇತ್ರ ಸಮನ್ವಯಧಿಕಾರಿ ವೆಂಕಟೇಶ್ ತಿಳಿಸಿದರು.ಹನೂರು ಪಟ್ಟಣದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಮಕ್ಕಳಿಗೆ ಕೊಡಲಾಗುತ್ತಿದೆ. ಅಲ್ಲದೇ ಉಚಿತ ಊಟ, ಬಟ್ಟೆ, ಪಠ್ಯ ಪುಸ್ತಕ, ಹಾಗೆ ಹತ್ತಾರು ಕಾರ್ಯಕ್ರಮಗಳನ್ನು ಸರ್ಕಾರ ಬಡ ಮಕ್ಕಳಿಗೆ ಉಚಿತವಾಗಿ ನೀಡುತ್ತಿದೆ. ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು. ಉಚಿತ ಊಟ, ಮೊಟ್ಟೆ, ಹಾಲು, ನುರಿತ ಶಿಕ್ಷಕರಿಂದ ಭೋದನೆ ಇನ್ನಿತರ ಸೌಲಭ್ಯ ಪಡೆದುಕೊಳ್ಳುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ಶಾಂತರಾಜು ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮವಾದ ಗುಣಮಟ್ಟದ ಶಿಕ್ಷಣದ ಜೊತೆಗೆ ಅನೇಕ ರೀತಿಯಲ್ಲಿ ಸೌಲಭ್ಯಗಳನ್ನು ಉಚಿತವಾಗಿ ಕೊಡುತ್ತಿದೆ. ನುರಿತ ಶಿಕ್ಷಕರಿಂದ ಪಠ್ಯ ಭೋದನೆ ಆಗುತ್ತಿದೆ. ಅಲ್ಲದೇ ಎಲ್ಲ ರೀತಿಯ ಸೌಲಭ್ಯಗಳು ಸಿಗುತ್ತಿದೆ. ಹೀಗಿರುವಾಗ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗಬೇಕು. ಆ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದರು.ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ್, ಶಿಕ್ಷಣ ಸಂಯೋಜಕ ಚಿನ್ನಪ್ಪಯ್ಯ, ಮುಖ್ಯ ಶಿಕ್ಷಕ ಮಹದೇವ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದೇವರಾಜ್, ಶಿಕ್ಷಕ ಪ್ರದೀಪ್, ಲೋಕೇಶ್ ಹಾಗೂ ಹಳೆಯ ವಿದ್ಯಾರ್ಥಿಗಳು, ಪೋಷಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.