ವಿದ್ಯಾರ್ಥಿ ದೆಸೆಯಲ್ಲಿ ನಾನು ಕೂಡ ತೀರಾ ಬಡ ಕುಟುಂಬದಲ್ಲಿ ಬೆಳೆದಿದ್ದೇನೆ. ನನ್ನ ತಾಯಿ ಹಾಲು ಮಾರಿ ನನಗೆ ಶಿಕ್ಷಣ ಕೊಡಿಸಿದ್ದರು
ಹೂವಿನಹಡಗಲಿ: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ ಕುಮಾರೇಶ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ವಿತರಣೆ ಸಮಾರಂಭದಲ್ಲಿ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.ವಿದ್ಯಾರ್ಥಿ ದೆಸೆಯಲ್ಲಿ ನಾನು ಕೂಡ ತೀರಾ ಬಡ ಕುಟುಂಬದಲ್ಲಿ ಬೆಳೆದಿದ್ದೇನೆ. ನನ್ನ ತಾಯಿ ಹಾಲು ಮಾರಿ ನನಗೆ ಶಿಕ್ಷಣ ಕೊಡಿಸಿದ್ದರು. ಅನೇಕ ಕುಟುಂಬದಲ್ಲಿ ಇಂದಿಗೂ ಬಡತನವಿದ್ದರೂ ನಿಮ್ಮ ತಂದೆ ತಾಯಿ ಕಷ್ಟಪಟ್ಟು, ನಿಮಗೆ ಶಿಕ್ಷಣ ಕೊಡಿಸುತ್ತಿದ್ದಾರೆ, ಆದರಿಂದ ಉತ್ತಮವಾಗಿ ಎಲ್ಲರೂ ಅಭ್ಯಾಸ ಮಾಡಬೇಕೆಂದು ಹೇಳಿದರು.
ಗ್ರಾಮೀಣ ಭಾಗದ ಮಕ್ಕಳಿಗೂ ಕೂಡ ಅನೇಕ ಸಂದರ್ಭದಲ್ಲಿ ಶಿಕ್ಷಣ ಕೊಡಿಸುವುದು ಕಷ್ಟಕರವಾಗಿದ್ದರೂ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ನಮ್ಮ ತಾಲೂಕಿನ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಆಯಾ ಕೋರ್ಸಗಳಿಗೆ ಅನುಗುಣವಾಗಿ ನಲವತ್ತು ಸಾವಿರದಿಂದ ಐವತ್ತು ಸಾವಿರವರೆಗೆ ಶಿಷ್ಯ ವೇತನ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.ಕಲ್ಯಾಣ ಕರ್ನಾಟಕ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ್ ಮಾತನಾಡಿ, ಈ ಒಂದು ಸುಜ್ಞಾನ ನಿಧಿ ಶಿಷ್ಯವೇತನ ನೀಡುವ ಉದ್ದೇಶ ಬಡ ಕುಟುಂಬ ಅಭಿವೃದ್ಧಿ ಪಡಿಸುವ ಉದ್ದೇಶವೇ ಆಗಿದೆ. ಮುಂದಿನ ಜೀವನದ ಆಶಾ ಭಾವನೆಗಳಿಗೆ ಸಂಬಂಧಿಸಿದಂತೆ, ಸ್ವಸಹಾಯ ಸಂಘದ ಸದಸ್ಯರು ತಮ್ಮ ಮಕ್ಕಳನ್ನು ಉನ್ನತ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಕಡೆಗಳಲ್ಲಿ ಸಾಲ ಪಡೆದುಕೊಂಡು ಸಮಸ್ಯೆ ಮಾಡಿಕೊಳ್ಳಬಾರದೆಂದು ಹೇಳಿದರು.
ಸ್ವಸಹಾಯ ಸಂಘದ ಸದಸ್ಯರ ಹೆಣ್ಣು ಮಕ್ಕಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಡೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ನೀಡುವ ಕಾರ್ಯಕ್ರಮ ಹೆಗ್ಗಡೆಯವರು, ಪ್ರತಿ ವರ್ಷ ಲಕ್ಷಗಟ್ಟಲೆ ವಿದ್ಯಾರ್ಥಿನಿಯರಿಗೆ ಈ ಒಂದು ಕಾರ್ಯಕ್ರಮದಡಿಯಲ್ಲಿ ಸಹಾಯಧನ ನೀಡುತ್ತಾ ಬರುತ್ತಿದ್ದಾರೆ.ಈ ಕಾರ್ಯಕ್ರಮದ ಫಲಾನುಭವಿ ವಿದ್ಯಾರ್ಥಿಗಳು ತಾವು ಪಡೆದುಕೊಂಡ ಶಿಷ್ಯ ವೇತನದ ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ತಂದೆ ತಾಯಿಗಳಿಗೆ ಒಳ್ಳೆಯ ಹೆಸರನ್ನು ತೆಗೆದುಕೊಂಡು ಬರುವುದು, ಅವರ ಜವಾಬ್ದಾರಿ ಆಗಿದೆ ಎಂದು ಹೇಳಿದರು.
ಜಿಲ್ಲಾ ನಿರ್ದೇಶಕರ ಸತೀಶ್ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸಂತೋಷ್ ಜೈನ್, ಭರತೇಶ್ ಬಸ್ತಿ, ಸುಭಾಷ್ ವರಕನಹಳ್ಳಿ, ಚಂದ್ರಪ್ಪ ತಳಕಲ್, ಪ್ರಾಂಶುಪಾಲ ಎಸ್.ಎಸ್. ಪಾಟೀಲ್, ತಾಲೂಕಿನ ಯೋಜನಾಧಿಕಾರಿ ಮಂಜುನಾಥ್ ಹಾಗೂ ವಲಯದ ಮೇಲ್ವಿಚಾರಕ ಶಶಿಕುಮಾರ್, ಸವಿತಾ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಫಲಾನುಭವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.