ಸಾರಾಂಶ
ಕೊಪ್ಪಳ: ಮಕ್ಕಳು ಶಿಕ್ಷಣ ಹಕ್ಕಿನಿಂದ ವಂಚಿತರಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳೊಂದಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ-2009ರ ಮೇಲ್ವಿಚಾರಣೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೇಲ್ವಿಚಾರಣೆ ಮತ್ತು ಪ್ರಗತಿ ಪರಿಶೀಲನೆ ಅಧಿಕಾರ ಹೊಂದಿದೆ. ದೇಶದ ಸಮಸ್ತ ಮಕ್ಕಳಿಗೂ ಶಿಕ್ಷಣ ಉಚಿತವಾಗಿ ದಯಪಾಲಿಸಿದೆ. ಮಕ್ಕಳು ಈ ಹಕ್ಕಿನಿಂದ ವಂಚಿತರಾಗದಂತೆ ಕ್ರಮವಹಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತನ್ನಿ, ಅಶ್ಯವಿದ್ದಲ್ಲಿ ಗ್ರಾಪಂ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಣ ಕಾರ್ಯಪಡೆಯ ಸಹಾಯ ಪಡೆಯಿರಿ ಮತ್ತು ಈ ಸಮಿತಿ ಸಕ್ರಿಯಗೊಳಿಸಿ ಎಂದರು.
ಶಾಲೆಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಯಾವುದೇ ಶಾಲೆಗಳಲ್ಲಿ ಇಂತಹ ಮೂಲಭೂತ ಸೌಲಭ್ಯ ಇಲ್ಲದಿದ್ದಲ್ಲಿ ಕೂಡಲೇ ಸೌಲಭ್ಯವ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಶಾಲೆಯ ಆವರಣದಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ, ಶಾಲೆಯ ವ್ಯಾಪ್ತಿಯ 200 ಮೀಟರನೊಳಗೆ ಯಾರಾದರೂ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸ್ಥಳೀಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಮಾರಾಟ ಕೇಂದ್ರ ತಗೆದು ಹಾಕಿಸಲು ಕ್ರಮ ಕೈಗೊಳ್ಳಿ ಪ್ರಭಾವಿಗಳ ಒತ್ತಡ ಬಂದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿ ನೀಡಿ ಈ ಬಗ್ಗೆ ಆಯೋಗದಿಂದ ಕ್ರಮ ವಹಿಸಲಾಗುವುದೆಂದು ಹೇಳಿದರು.ಮಕ್ಕಳು ಶಾಲೆಯಿಂದ ಹೊರಗುಳಿದಲ್ಲಿ ಬಾಲ್ಯವಿವಾಹ, ಲೈಂಗಿಕ ಅಪರಾಧ, ಬಾಲ ಕಾರ್ಮಿಕತೆ, ಭಿಕ್ಷಾಟನೆ, ಮಾದಕ ವ್ಯಸನ ಇನ್ನೀತರೆ ಅಪರಾಧಗಳಿಗೆ ಬಲಿಯಾಗಬಹುದಾಗಿರುತ್ತದೆ. ಮಕ್ಕಳು ಶಾಲೆಯಲ್ಲಿದ್ದರೆ, ಶಿಕ್ಷಣದೊಂದಿಗೆ ರಕ್ಷಣೆ ಲಭ್ಯವಾಗುತ್ತದೆ. ಆದ್ದರಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ.
ಜಿಲ್ಲೆಯಲ್ಲಿ ಬಾಲ್ಯವಿವಾಹ, ಲೈಂಗಿಕ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ಜಾಗೃತಿ ಮೂಡಿಸಿ ಮಕ್ಕಳ ಮೇಲಾಗುವ ಹಲ್ಲೆ, ದೌರ್ಜನ್ಯ ಕಿರುಕುಳ ತಡೆಗಟ್ಟಿ ಎಂದರು.ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ-1098ರ ಬಗ್ಗೆ ಶಾಶ್ವತ ಗೋಡೆಬರಹ, ಸಲಹಾ ಪೆಟ್ಟಿಗೆ, ಮಕ್ಕಳ ರಕ್ಷಣಾ ಸಮಿತಿ ರಚಿಸಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಶಾಲೆಗಳನ್ನು ಪೊಲೀಸ್ ಬೀಟ್‌ಗಳನ್ನಾಗಿ ಗುರುತಿಸಿ ಪೊಲೀಸ್ ಗಸ್ತು ನಡೆಯುವಂತೆ ಪೊಲೀಸ್ ಇಲಾಖೆಗೆ ಆಯಾ ಸಂಸ್ಥೆಗಳ ಮುಖ್ಯಸ್ಥರಿಂದ ಕ್ರಮ ವಹಿಸಬೇಕು. ಪೊಲೀಸ್ ಇಲಾಖೆಯ ತೆರೆದ ಮನೆ ಕಾರ್ಯಕ್ರಮಕ್ಕೆ ಮಕ್ಕಳನ್ನು ಪೊಲೀಸ್ ಠಾಣೆಗಳಿಗೆ ಕರೆದುಕೊಂಡು ಹೋಗಿ ಅಥವಾ ಪೊಲೀಸ್ ಅಧಿಕಾರಿಗಳನ್ನು ಆಮಂತ್ರಿಸಿ ಕಾರ್ಯಕ್ರಮ ಆಯೋಜಿಸಿ ಎಂದರು.
ಅನುಮತಿ ಪಡೆಯದೇಯೇ ವಸತಿ ಶಾಲೆ ನಡೆಸುತ್ತಿರುವುದು, ಅಕ್ರಮವಾಗಿ ವಸತಿ ಶಾಲೆಗಳ ಪರೀಕ್ಷೆಗೆ ತರಬೇತಿ (ಕೋಚಿಂಗ) ಕೇಂದ್ರ ನಡೆಸುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಇಂತಹ ಸಂಸ್ಥೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ವರದಿ ರಾಜ್ಯ ಮಕ್ಕಳ ರಕ್ಷಣಾ ಆಯೋಗಕ್ಕೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.ಈ ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮೂಹ ಸಂಪನ್ಮೂಲ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))