ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು. ಯೋಜನಾ ಅನುಷ್ಠಾನ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ೨೪-೭ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು. ಯೋಜನಾ ಅನುಷ್ಠಾನ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ೨೪-೭ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ನೀರು ಶುದ್ಧೀಕರಣ ಘಟಕಗಳಲ್ಲಿ ಹಾಗೂ ಜಲ ಸಂಗ್ರಹಾರಗಳಲ್ಲಿ ಸ್ವಚ್ಛತೆ ಕಾಪಾಡಿ, ನಗರಕ್ಕೆ ಶುದ್ಧವಾದ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ನಗರದಲ್ಲಿ ವಿಶ್ವ ಬ್ಯಾಂಕ್ ನೆರವಿನ ಯೋಜನೆಗಳ ಮಾಹಿತಿ ಪಡೆದು ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸಲಹೆ ಸೂಚನೆಗ ನೀಡಿದರು. ಪ್ರಗತಿಯಲ್ಲಿರುವ ನೀರು ಸರಬರಾಜು ವ್ಯವಸ್ಥೆಯ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವದರ ಜೊತೆಗೆ, ಯೋಜಿತ ನೀರು ಶುದ್ಧೀಕರಣ ಘಟಕವನ್ನು ಡಿಸೆಂಬರ್-೨೦೨೪ ರೊಳಗಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಕೆಯುಐಡಿಎಫ್‌ಸಿಯ ಅಧೀಕ್ಷಕ ಅಭಿಯಂತರೆ ಲಕ್ಷ್ಮಿ ಸುಳಗೇಕರ್, ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಬುರಕುಲೆ, ವಿ.ಎಂ. ಸಾಲಿಮಠ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಶಿಕುಮಾರ ಹತ್ತಿ, ವಿಜಯಾನಂದ ಸೋಲ್ಲಾಪೂರ, ಉಮೇಶ ನಿಟ್ಟೂರಕರ, ಬಸವರಾಜ ಬೇವಿನಕಟ್ಟಿ, ಎಲ್ ಮತ್ತು ಟಿಯ ಯೋಜನಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿ, ಸ್ಮೆಕ್ ಕನ್ಸಲ್ಟೆನ್ಸಿ ತಂಡದ ನಾಯಕರು ಮತ್ತು ಸಿಬ್ಬಂದಿ, ಯೋಜನಾ ಅನುಷ್ಠಾನ ಘಟಕದ ಸಿಬ್ಬಂದಿಯಿದ್ದರು.