ಸಾರಾಂಶ
ಬರ ಹಿನ್ನೆಲೆಯಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ರಾಮರಡ್ಡಿ ಪಾಟೀಲ್ ಅವರು ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬರ ಹಿನ್ನೆಲೆಯಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ರಾಮರಡ್ಡಿ ಪಾಟೀಲ್ ಅವರು ಹೇಳಿದರು.ಇಲ್ಲಿನ ತಾಪಂ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ವ್ಯವಸ್ಥೆಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಅಭಾವ ಇರುವ ಗ್ರಾಮ ಪಂಚಾಯತಿವರು ಮುಂಜಾಗ್ರತೆ ವಹಿಸಿ ಮೇಲಧಿಕಾರಿಗಳಿಗೆ ವರದಿ ಮಾಡಬೇಕು. ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗಂತೆ ನೋಡಿಕೊಳ್ಳಬೇಕು. ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಿಗೆ ಪಿಡಿಒ ಅವರು ಭೇಟಿ ನೀಡಿ ಕುಡಿಯುವ ನೀರಿನ ಕುರಿತ ಮಾಹಿತಿ ಪಡೆದುಕೊಂಡು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.
ಕೆಲವು ಗ್ರಾಮಗಳಲ್ಲಿ ಜೆಜೆಎಮ್ ಕಾಮಗಾರಿಗಳು ಪೂರ್ಣವಾಗಿವೆ ಅಂತಹ ಗ್ರಾಮಗಳಲ್ಲಿ ಪೈಪಲೈನ್ ಜೋಡಿಸಿ ಗ್ರಾಮಗಳಿಗೆ ನೀರನ್ನು ಸರಬರಾಜು ಮಾಡಬೇಕು. ಅಗತ್ಯ ಇರುವ ಗ್ರಾಮಗಳ್ಲಲಿ ಖಾಸಗಿ ಬೋರ್ವೆಲ್ ಗಳ ಮೂಲಕ ಗ್ರಾಮಗಳಿಗೆ ನೀರು ಪೂರೈಸಬೇಕು ಎಂದು ಹೇಳಿದರು.ಈ ಸಭೆಯಲ್ಲಿ ತಹಸೀಲ್ದಾರ್ ಸಿದ್ದರಾಯ ಭೋಸಗಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಕೆ. ಪಾಟೀಲ, ಸಹಾಯಕ ನಿರ್ದೇಶಕರು (ಪ.ರಾ) ಗಣೇಶ ಕೆ.ಎಸ್., ವ್ಯವಸ್ಥಾಪಕ ರಾಜೇಂದ್ರ ಮೊರಬದ, ತಾಲೂಕು ಸಿಬ್ಬಂದಿ ಶ್ರೀಧರ ಸರದಾರ, ರಮೇಶ ಮಾದರ ಸೇರಿದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಇದ್ದರು.