ತಾಲೂಕಿನ ಎಂ ಎನ್ ಕೋಟೆ ಗ್ರಾಮ ಪಂಚಾಯಿತಿಯ ವಿಶೇಷ ಸಭೆ ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾದ ಸಿದ್ದಗಂಗಮ್ಮ ಕಲ್ಲೇಶ್ ಅವರ ನೇತೃತ್ವದಲ್ಲಿ ಗುರುವಾರ ನಡೆಯಿತು.
ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಎಂ ಎನ್ ಕೋಟೆ ಗ್ರಾಮ ಪಂಚಾಯಿತಿಯ ವಿಶೇಷ ಸಭೆ ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾದ ಸಿದ್ದಗಂಗಮ್ಮ ಕಲ್ಲೇಶ್ ಅವರ ನೇತೃತ್ವದಲ್ಲಿ ಗುರುವಾರ ನಡೆಯಿತು. ಅಧ್ಯಕ್ಷರಾದ ಸಿದ್ದಗಂಗಮ್ಮ ಕಲ್ಲೇಶ್ ಮಾತನಾಡಿ ವಿಶೇಷ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ನಿಮ್ಮ ನಿಮ್ಮ ಗ್ರಾಮಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಬೇಕು. ಕ್ರಿಯಾ ಯೋಜನೆಯಲ್ಲಿ ಗ್ರಾಮಗಳ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ಸಮಸ್ಯೆಗೆ ಹೆಚ್ಚು ಆದ್ಯತೆಯನ್ನು ನೀಡಬೇಕು. ಎಲ್ಲಾ ಗ್ರಾಮಗಳಲ್ಲೂ ಕೂಡ ಸ್ವಚ್ಛತೆಯನ್ನು ಕಾಪಾಡಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕೆಂದು ತಿಳಿಸಿದರು. ಬೇಸಿಗೆ ಸಮೀಪ ಇರುವುದರಿಂದ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಪಿಡದೊಓ ಹಾಗೂ ಎಲ್ಲಾ ನೀರು ವಿತರಕರು ಗಮನ ಹರಿಸಬೇಕು. ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಿದ್ದಗಂಗಯ್ಯ ಸಿದ್ದರಾಮಯ್ಯನ ಮೋಹನ್ ದಿಲೀಪ್ ಕುಮಾರ್ ರವೀಶ್ ಲೋಕೇಶ್ ಕಾಂತರಾಜು ಶಶಿಕಲಾ ಯೋಗೇಶ್ ಶೈಲಜಾ ಗಂಗಾಧರಯ್ಯ ಉಮಾ ದಿವ್ಯ ಯಶೋಧ ಲೋಕೇಶ್ ಪಿಡಿಒ ವಸಂತ್ ಲೆಕ್ಕ ಸಹಾಯಕ ಸಂದೀಪ್ ಭಾಗವಹಿಸಿದ್ದರು.