ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪರಿಶೀಲಿಸುತ್ತಿರುವ ಬಿಎಲ್‌ಒ ಅಧಿಕಾರಿಗಳ ಸೇವೆ ಶ್ಲಾಘನೀಯ. ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ನಡೆಯುತ್ತಿರುವ ಈ ಮಹತ್ವದ ಕಾರ್ಯದಲ್ಲಿ ನಾವೆಲ್ಲರೂ ಸಕ್ರಿಯವಾಗಿ ಸಹಕರಿಸೋಣ. ನಿಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಿ.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದೆ. ಪ್ರತಿಯೊಬ್ಬ ಮತದಾರರು ತಮ್ಮ ಮನೆಗೆ ಭೇಟಿ ನೀಡುವ ಬಿಎಲ್ಒ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಹಾಗೂ ದಾಖಲೆ ಸಲ್ಲಿಸುವ ಮೂಲಕ ಈ ಪ್ರಕ್ರಿಯೆಯಲ್ಲಿ ತಪ್ಪದೇ ಭಾಗವಹಿಸಿ ತಮ್ಮ ಹೆಸರು ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ತಾಲೂಕಿನ ಕದಲೂರಿನ ತಮ್ಮ ನಿವಾಸಕ್ಕೆ ಬಿಎಲ್‌ಒ ಅಧಿಕಾರಿಗಳು ಭೇಟಿ ನೀಡಿದ ವೇಳೆ ಮತದಾದರಿಗೆ ಮಾಹಿತಿ ನೀಡಿ ಪರಿಶೀಲಿಸಿದ ಶಾಸಕರು, ಈ ವೇಳೆ ನಾನು ಹಾಗೂ ನನ್ನ ಕುಟುಂಬ ಸದಸ್ಯರು ಅಗತ್ಯ ದಾಖಲೆ ಸಲ್ಲಿಸಿ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದೇವೆ ಎಂದರು.
ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪರಿಶೀಲಿಸುತ್ತಿರುವ ಬಿಎಲ್‌ಒ ಅಧಿಕಾರಿಗಳ ಸೇವೆ ಶ್ಲಾಘನೀಯ. ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ನಡೆಯುತ್ತಿರುವ ಈ ಮಹತ್ವದ ಕಾರ್ಯದಲ್ಲಿ ನಾವೆಲ್ಲರೂ ಸಕ್ರಿಯವಾಗಿ ಸಹಕರಿಸೋಣ. ನಿಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಿ. ಈ ಪ್ರಕ್ರಿಯೆಯಲ್ಲಿ ತಪ್ಪದೇ ಭಾಗವಹಿಸಿ ಎಂದರು.ಈ ವೇಳೆ ಶಾಸಕರ ಪತ್ನಿ ವಿನುತಾ ಉದಯ್, ಗ್ರಾಪಂ ಮಾಜಿ ಅಧ್ಯಕ್ಷೆ ಕದಲೂರು ತಿಮ್ಮಣ್ಣ, ರವಿ, ಶಿವು, ವಿಜಯಕುಮಾರ್, ಶಿಕ್ಷಕರು ಹಾಜರಿದ್ದರು.
ಇಂದು ಶ್ರೀಭೈರವೇಶ್ವರ ಸ್ವಾಮಿ ಮಹಾಕುಂಭಾಭಿಷೇಕಮಂಡ್ಯ: ತಾಲೂಕಿನ ಯತ್ತಗದಹಳ್ಳಿ ಶ್ರೀಭೈರವೇಶ್ವರಸ್ವಾಮಿ (ಶ್ರೀಬೋರೇದೇವರು) ದೇಗುಲದಲ್ಲಿ ಶ್ರೀ ಭೈರವೇಶ್ವರಸ್ವಾಮಿಯ ೨೪ನೇ ವರ್ಷದ ಮಹಾ ಕುಂಭಾಭಿಷೇಕ ಮಹೋತ್ಸವ ಜು.೮ರಂದು ವಿಜೃಂಭಣೆಯಿಂದ ನಡೆಯಲಿದೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀಆದಿ ಚುಂಚನಗಿರಿ ಕೊಮ್ಮೇರಹಳ್ಳಿ ಶಾಖಾ ಮಠದ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ, ಕೊಡಗು-ಮೈಸೂರು ಸಂಸದ ಯದುವೀರ್ ಅವರು ಭಾಗವಹಿಸಲಿದ್ದಾರೆ. ಬೆಳಗ್ಗೆ ೬.೩೦ಕ್ಕೆ ಉದಯಪೂಜೆ, ಸರ್ವದೇವತಾ ಕುಂಭಾಭಿಷೇಕ, ನಿರೀಕ್ಷಣೆ, ದೇವತಾ ತತ್ವನ್ಯಾಸ, ಕಳಾನ್ಯಾಸ, ಹೋಮ, ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧೨ರವರೆಗೆ ಮಹಾಪೂಜೆ, ಪೂರ್ಣಾಹುತಿ, ಆಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.