ಭಾರತೀಯ ವಿದ್ಯಾ ಭವನ ಕೊಡಗು ಕೇಂದ್ರದ ವತಿಯಿಂದ ಕೊಡಗು ಜಿಲ್ಲಾ ಪೊಲೀಸ್ ಸಿಬ್ಬಂದಿಗಾಗಿ ಇಎನ್ ಟಿ ಉಚಿತ ಶಿಬಿರವನ್ನು ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಭಾರತೀಯ ವಿದ್ಯಾ ಭವನ ಕೊಡಗು ಕೇಂದ್ರದ ವತಿಯಿಂದ ಕೊಡಗು ಜಿಲ್ಲಾ ಪೊಲೀಸ್ ಸಿಬ್ಬಂದಿಗಾಗಿ ಇಎನ್ ಟಿ ಉಚಿತ ಶಿಬಿರವನ್ನು ಆಯೋಜಿಸಲಾಗಿತ್ತು.ಶಿಬಿರವನ್ನು ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ದಿನೇಶ್ ಬಿ. ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮೈಸೂರಿನಲ್ಲಿರುವ ವಾಕ್ , ಶ್ರವಣ ಮತ್ತು ಇಂಪ್ಲಾಂಟ್ ಕ್ಲಿನಿಕ್ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ತಜ್ಞ ವೈದ್ಯ ಡಾ. ರಾಧಾ ಸಿಂಹಾದ್ರಿ ಶಿಬಿರದ ನೇತೃತ್ವ ವಹಿಸಿದ್ದರು. ಭಾರತೀಯ ವಿದ್ಯಾ ಭವನದ ಕೊಡಗು ಘಟಕ ಕಾರ್‍ಯದರ್ಶಿ ಬಾಲಾಜಿ ಕಾಶ್ಯಪ್ ಉಪಸ್ಥಿತರಿದ್ದರು. ಪೊಲೀಸ್ ಸಿಬ್ಬಂದಿ ಅಧಿಕ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದರು.
