ಧರ್ಮ ಹಿಂದೂ, ಜಾತಿ ಮರಾಠ ಎಂದು ನಮೂದಿಸಿ

| Published : Sep 20 2025, 01:00 AM IST

ಸಾರಾಂಶ

ಸರ್ಕಾರ ವಿವಿಧ ದಾಖಲೆಗಳಲ್ಲಿ ಮರಾಠ, ಆರ್ಯ ಮರಾಠ, ಮರಾಠ ಕ್ಷತ್ರೀಯ ಇತ್ಯಾದಿ ಹೆಸರುಗಳಿಂದ ಗುರುತಿಸಲಾಗುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಜ್ಯ ಸರ್ಕಾರ ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರಲ್ಲಿ ಕ್ಷತ್ರಿಯ ಮರಾಠ ಸಮುದಾಯದವರು ತಮ್ಮ ಜಾತಿ ಕಾಲಂನಲ್ಲಿ ಮರಾಠ ಎಂದು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಕಡ್ಡಾಯವಾಗಿ ನಮೂದಿಸುವಂತೆ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟರಾವ್ ಸಾಠೆ ಮನವಿ ಮಾಡಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಮ್ಮ ಸಮುದಾಯದ ನಾಯಕ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮರಾಠ ಸಮಾಜದ ನಾಯಕರ, ಜನಪ್ರತಿನಿಧಿಗಳ, ಸಂಘಸಂಸ್ಥೆಗಳ ಮುಖಂಡರ ಉಪಸ್ಥಿತಿಯಲ್ಲಿ ಇನ್ನು ಮುಂದೆ ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ತಮ್ಮ ಸಮುದಾಯವನ್ನು ಮರಾಠ ಎಂದು ಗುರುತಿಸಲ್ಪಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಸರ್ಕಾರ ವಿವಿಧ ದಾಖಲೆಗಳಲ್ಲಿ ಮರಾಠ, ಆರ್ಯ ಮರಾಠ, ಮರಾಠ ಕ್ಷತ್ರೀಯ ಇತ್ಯಾದಿ ಹೆಸರುಗಳಿಂದ ಗುರುತಿಸಲಾಗುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ. ತಮ್ಮ ಸಮುದಾಯವು ಪ್ರಸ್ತುತ ಇತರ ಹಿಂದುಳಿದ ಜಾತಿ (ಓಬಿಸಿ) ಮೀಸಲಾತಿಯಲ್ಲಿದ್ದು, ಬೇರೆ ಬೇರೆ ಹೆಸರುಗಳ ಕಾರಣದಿಂದ ಈ ಮೀಸಲಾತಿಯ ಲಾಭ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಒಂದೇ ಹೆಸರಿನಿಂದ ಎಲ್ಲರೂ ಗುರುತಿಸಲ್ಪಡಬೇಕು ಎಂದರು.ಆದ್ದರಿಂದ ಸರ್ಕಾರ ನಡೆಸುವ ಜಾತಿಗಣತಿ, ಈ ಸಾಮಾಜಿಕ - ಶೈಕ್ಷಣಿಕ ಗಣತಿಯಲ್ಲಿ ಧರ್ಮ ಕಾಲಂನಲ್ಲಿ ಹಿಂದು, ಜಾತಿ ಕಾಲಂನಲ್ಲಿ ಮರಾಠ, ಉಪಜಾತಿ ಕಾಲಂನಲ್ಲಿ ಕುಣಬಿ, ಮಾತೃಭಾಷೆ ಕಾಲಂನಲ್ಲಿ ಮರಾಠಿ ಎಂದು ಎಲ್ಲರೂ ಕಡ್ಡಾಯವಾಗಿ ನಮೂದಿಸಬೇಕು ಎಂದರು.ಪತ್ರಿಕಾಗೋಷ್ಠಿಯಲ್ಲಿ ಚಂದ್ರಶೇಖರ್, ಶ್ರೀನಿವಾಸರಾವ್ ಸಾಳಂಕಿ, ಮಮತಾಬಾಯಿ ಉಪಸ್ಥಿತರಿದ್ದರು.೧೯ಸಿಎಚ್‌ಎನ್೧ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ತಿಕಾಗೋಷ್ಠಿಯಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟರಾವ್ ಸಾಠೆ ಮಾತನಾಡಿದರು.--------