ಸಾರಾಂಶ
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪುನಃ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮಡಿಯಾಗಿತ್ತು.
ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭಾನುವಾರ ಇಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಅಭಿನಂದನಾ ಸಮಾವೇಶ ಅಕ್ಷರಶಃ ಹುರುಪು, ಹುಮ್ಮಸ್ಸು, ಸಂಭ್ರಮದ ಬುಗ್ಗೆಯಾಗಿತ್ತು.
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಈ. ತುಕಾರಾಂ, ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಈ. ಅನ್ನಪೂರ್ಣಾ ತುಕಾರಾಂ ಸೇರಿದಂತೆ ಹಲವು ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಹಿತೈಷಿಗಳು ಗೆಲುವನ್ನು ಸಂಭ್ರಮಿಸಿದರು.ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪುನಃ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮಡಿಯಾಗಿತ್ತು. ಸಿದ್ದರಾಮಯ್ಯ ಅವರು ಮಾತನಾಡುವಾಗ, ಹೌದು ಹುಲಿಯಾ ಎಂಬ ಘೋಷಣೆ ಆಗಾಗ್ಗೆ ಜನರಿಂದ ಕೇಳಿ ಬರುತ್ತಿತ್ತು.
ಪಕ್ಷದ ಇನ್ನಿತರ ಮುಖಂಡರು ಮಾತನಾಡುವಾಗ ಪಕ್ಷದ ಕಾರ್ಯಕರ್ತರಿಂದ ಕೇಕೆ, ಸಿಳ್ಳೆಗಳು ಕೇಳಿ ಬರುತ್ತಿದ್ದವು. ಸಮಾವೇಶಕ್ಕೆ ಆಗಮಿಸಿದ್ದ ಕಾರ್ಯಕರ್ತರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು.ಸಂಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.