ಸಾರಾಂಶ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ ಹಾಗೂ ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕಾರ್ಕಳ ಶಾಖಾ ಗ್ರಂಥಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ಶಾಖಾ ಗ್ರಂಥಾಲಯದ ಗ್ರಂಥಪಾಲಕಿ ವನಿತಾ, ಕಾರ್ಕಳ ಶ್ರೀ ವೆಂಕರಮಣ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಉಷಾ ನಾಯಕ್, ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ಎಚ್.ಓ.ಡಿ. ಜೈ ಕಿಶನ್ ಭಟ್, ಕೌಶಲ್ಯಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಬಿ., ಸೀಡಾಕ್ ಸೆಂಟರ್ ಮ್ಯಾನೇಜರ್ ಪೃಥ್ವಿರಾಜ್ ನಾಯಕ್, ಸಿಡಾಕ್‌ನ ಶ್ರುತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರೇಮ ಅವರು ಕಾರ್ಯಕ್ರಮ ನಿರೂಪಿಸಿ, ಗ್ರಂಥಾಪಾಲಕಿ ನಮಿತಾ ಅವರು ವಂದಿಸಿದರು.