ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಉದ್ಯೋಗ ಹುಡುಕುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗುವತ್ತ ಚಿಂತಿಸಬೇಕು. ಹೊಸ ಆಲೋಚನೆಗಳನ್ನು ಗುರುತಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಧೈರ್ಯ, ಸೃಜನಶೀಲತೆ, ಅಪಾಯ ನಿರ್ವಹಣೆ, ತಂತ್ರಜ್ಞಾನ ಬಳಕೆ ಹಾಗೂ ಮಾರುಕಟ್ಟೆಯ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಸೆಡಾಕ್ ಸಂಸ್ಥೆಯ ಉಪನಿರ್ದೇಶಕ ಶಿವಾನಂದ ಯಲಿಗರ್ ಹೇಳಿದರು.
ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಉದ್ಯೋಗ ಹುಡುಕುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗುವತ್ತ ಚಿಂತಿಸಬೇಕು. ಹೊಸ ಆಲೋಚನೆಗಳನ್ನು ಗುರುತಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಧೈರ್ಯ, ಸೃಜನಶೀಲತೆ, ಅಪಾಯ ನಿರ್ವಹಣೆ, ತಂತ್ರಜ್ಞಾನ ಬಳಕೆ ಹಾಗೂ ಮಾರುಕಟ್ಟೆಯ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಸೆಡಾಕ್ ಸಂಸ್ಥೆಯ ಉಪನಿರ್ದೇಶಕ ಶಿವಾನಂದ ಯಲಿಗರ್ ಹೇಳಿದರು. ಅವರು ಉಡುಪಿಯ ಕರ್ನಾಟಕ ಉದ್ಯಮಶೀಲತೆ ಅಭಿವೃದ್ದಿ ಕೇಂದ್ರ (ಸಿಡಾಕ್) ಮತ್ತು ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ಲೇಸ್ಮೆಂಟ್ ಸೆಲ್, ಐಕ್ಯೂಎಸಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ 3 ದಿನಗಳ ಉದ್ಯಮಶೀಲತಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್, ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವಲ್ಲಿ ಹಾಗೂ ಯುವಜನರನ್ನು ಸ್ವಯಂ ಉದ್ಯೋಗ ಮತ್ತು ಉದ್ಯಮಶೀಲತೆಯತ್ತ ಪ್ರೇರೇಪಿಸುವಲ್ಲಿ ಸಿಡಾಕ್ ಮಹತ್ವದ ಕೊಡುಗೆ ನೀಡುತ್ತಿದೆ ಎಂದರು.
ಐಕ್ಯುಎಸಿ ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಪೃಥ್ವಿರಾಜ್ ನಾಯಕ್ ಹಾಗೂ ಶ್ರುತಿ ಉಪಸ್ಥಿತರಿದ್ದರು. ಬಿಕಾಂ ವಿದ್ಯಾರ್ಥಿನಿರಾ ತೇಜಸ್ವಿ ಮತ್ತು ತಂಡ ಪ್ರಾರ್ಥಿಸಿದರು, ಪ್ಲೇಸ್ಮೆಂಟ್ ಸೆಲ್ ಸಂಯೋಜಕಿ ಬಿಂದು ಟಿ. ಸ್ವಾಗತಿಸಿದರು. ಪಿಜಿ ವಿಭಾಗದ ಪ್ಲೇಸ್ಮೆಂಟ್ ಸೆಲ್ ಅಧಿಕಾರಿ ಮರ್ವಿನ್ ಡಿಸೋಜ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರಘು ನಾಯ್ಕ ಕಾರ್ಯಕ್ರಮ ನಿರೂಪಿಸಿದರು.