ಮರಗಳು ಮಾನವಕುಲಕ್ಕೆ ಶುದ್ಧ ಗಾಳಿ, ನೆರಳು ಹಾಗೂ ಪರಿಸರ ಸಮತೋಲನವನ್ನು ನೀಡುತ್ತವೆ. ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಂಕ್ರೀಟ್ ನಿರ್ಮಾಣದಿಂದ ಹಸಿರು ಪ್ರದೇಶಗಳು ಕಡಿಮೆಯಾಗುತ್ತಿವೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀರಂಗಪಟ್ಟಣ ತಾಲೂಕಿನ ಬಸ್ತೀಪುರ ಸಮೀಪದ ಕೆಬಿಲ್ ಸಿಲಿಕಾನ್ ಸಿಟಿ ಬಡಾವಣೆಯ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮೈಸೂರು ಲಯನ್ ಗಾರ್ಡನ್ ಸಿಟಿ ಸಂಸ್ಥೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.ಲಯನ್ ಗಾರ್ಡನ್ ಸಿಟಿ ಸಂಸ್ಥೆಯ ಕಾರ್ಯದರ್ಶಿ ಡಾ.ಈ.ಸಿ.ನಿಂಗರಾಜ್‌ಗೌಡ ಅವರು ಗಿಡ ನೆಟ್ಟು ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಕಾರ್ಯಕ್ರಮವಾಗದೆ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಭಾಗವಾಗಬೇಕು ಎಂದರು.
ಮರಗಳು ಮಾನವಕುಲಕ್ಕೆ ಶುದ್ಧ ಗಾಳಿ, ನೆರಳು ಹಾಗೂ ಪರಿಸರ ಸಮತೋಲನವನ್ನು ನೀಡುತ್ತವೆ. ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಂಕ್ರೀಟ್ ನಿರ್ಮಾಣದಿಂದ ಹಸಿರು ಪ್ರದೇಶಗಳು ಕಡಿಮೆಯಾಗುತ್ತಿವೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆ, ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು, ಅವುಗಳ ಪಾಲನೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಒಬ್ಬ ವ್ಯಕ್ತಿ-ಒಂದು ಗಿಡ ಎಂಬ ಸಂಕಲ್ಪದೊಂದಿಗೆ ಹಸಿರು ಮೈಸೂರಿನ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ವಿ.ಪಿ.ಲಕ್ಷ್ಮೀನಾರಾಯಣ್, ಆಡಳಿತಾಧಿಕಾರಿ ಸಿ.ಡಿ.ಕೃಷ್ಣ, ಉಪಾಧ್ಯಕ್ಷ ಎನ್.ಶಂಕರ್, ನಿತಿನ್‌ಕುಮಾರ್, ರಾಜು, ದಿನೇಶ್ ಮತ್ತು ಪದಾಧಿಕಾರಿಗಳು, ಸದಸ್ಯರು ಹಾಗೂ ಪರಿಸರ ಪ್ರೇಮಿಗಳು ಉಪಸ್ಥಿತರಿದ್ದರು.ಇಂದು ಲೋಕಾಯುಕ್ತ ಅಧಿಕಾರಿಗಳಿಂದ ದೂರು, ಅಹವಾಲು ಸ್ವೀಕಾರಶ್ರೀರಂಗಪಟ್ಟಣ:ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಆ.12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರವರೆಗೆ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ತಾಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕಾರ ಮಾಡಲಿದ್ದಾರೆ.ಸುನೀಲ್ ಕುಮಾರ್.ಎಚ್.ಟಿ, ಡಿವೈಎಸ್‌ಪಿ ಹಾಗೂ ಬ್ಯಾಟರಾಯಗೌಡ.ಬಿ.ಪಿ.ರವಿಕುಮಾರ್.ಎಂ.ಲೇಪಾಕ್ಷ ಮೂರ್ತಿ.ಆರ್.ಜಿ ಪೊಲೀಸ್ ಇನ್ಸ್‌ಪೆಕ್ಟರ್, ಕರ್ನಾಟಕ ಲೋಕಾಯುಕ್ತರು ಸಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಭ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು/ಅಹವಾಲುಗಳೇನಾದರೂ ಇದ್ದಲ್ಲಿ ಸ್ವೀಕರಿಸಲಾಗುವುದು ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.